ಮಹಿಳೆಯರು ಸಮಾಜದ ಬೆನ್ನೆಲುಬು: ಬಿ.ಎಂ. ಜಗಾಪುರ

ಮಹಿಳೆಯರು ಸಮಾಜದ ಬೆನ್ನೆಲುಬು: ಬಿ.ಎಂ. ಜಗಾಪುರ Women are the backbone of society: B.M. Jagapura

ಮಹಿಳೆಯರು ಸಮಾಜದ ಬೆನ್ನೆಲುಬು: ಬಿ.ಎಂ. ಜಗಾಪುರ  

ಬ್ಯಾಡಗಿ, ಜು.16: ಮಹಿಳೆಯರು ಕೇವಲ ಕುಟುಂಬದ ರಕ್ಷಕರು ಮಾತ್ರವಲ್ಲ, ಸಮಾಜದ ಬೆನ್ನೆಲುಬು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಬಿ.ಎಂ. ಜಗಾಪುರ ಹೇಳಿದರು.  

ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶ್ರೀ ಧರ್ಮಸ್ಥಳ ಸಂಘದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಬ್ಯಾಡಗಿ ವಲಯದ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ಒಬ್ಬ ಮಹಿಳೆ ಶಿಕ್ಷಣ ಮತ್ತು ಜ್ಞಾನದಿಂದ ಸಬಲಳಾದರೆ ಇಡೀ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗೆ ಕಾರಣವಾಗುತ್ತದೆ. ಜ್ಞಾನವಿಕಾಸ ಕೇಂದ್ರಗಳು ಮಹಿಳೆಯರಲ್ಲಿ ಆತ್ಮವಿಶ್ವಾಸ, ನಾಯಕತ್ವ, ಆರೋಗ್ಯದ ಅರಿವು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ತರ ಕಾರ್ಯ ಮಾಡುತ್ತಿವೆ ಎಂದು ಹೇಳಿದರು.  

ಸ್ವಸಹಾಯ ಸಂಘಗಳ ಮೂಲಕ ಸಾವಿರಾರು ಮಹಿಳೆಯರು ಇಂದು ಸ್ವಂತ ಉದ್ಯಮ ಆರಂಭಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದಾರೆ. ಮಹಿಳೆಯರ ಆತ್ಮವಿಶ್ವಾಸ ಹೆಚ್ಚಿಸಲು ಇಂತಹ ವೇದಿಕೆಗಳು ಅಗತ್ಯವೆಂದು ಅವರು ಅಭಿಪ್ರಾಯಪಟ್ಟರು.  

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡ ಮುರುಗಪ್ಪ ಶೆಟ್ಟರ್, ಸರ್ಕಾರ ಮಹಿಳೆಯರ ಶಿಕ್ಷಣ, ಆರೋಗ್ಯ, ಸ್ವಯಂ ಉದ್ಯೋಗ ಹಾಗೂ ಸಾಮಾಜಿಕ ಭದ್ರತೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಪ್ರತಿಯೊಬ್ಬ ಮಹಿಳೆಯೂ ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.  

ತಾಲ್ಲೂಕು ಯೋಜನಾಧಿಕಾರಿ ಮಾದೇವ ನಾಯ್ಕ್‌ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳ ಕುರಿತು ವಿವರಿಸಿದರು.  

ಈ ಸಂದರ್ಭದಲ್ಲಿ ಕೇಂದ್ರದ ಸದಸ್ಯರಿಗೆ ವಿವಿಧ ಸ್ಪರ್ಧೆಗಳು ನಡೆಸಿ ಬಹುಮಾನ ವಿತರಿಸಲಾಯಿತು.  

ಕಾರ್ಯಕ್ರಮದಲ್ಲಿ ತಾಲ್ಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಮಲ್ಲಮ್ಮ ಅರಹುಣಸಿ, ಒಕ್ಕೂಟದ ಅಧ್ಯಕ್ಷರು, ಸೇವಾ ಪ್ರತಿನಿಧಿಗಳು ಹಾಗೂ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.