ಸಮಾಜದ ಬಹುದೊಡ್ಡ ಶಕ್ತಿಯೇ ಮಹಿಳೆ
ನರೇಗಲ್ 10 : ಸ್ತ್ರೀ ಎಂಬುದು ಸಮಾಜದ ಬಹುದೊಡ್ಡ ಶಕ್ತಿಯಾಗಿದ್ದು ಇದರಿಂದ ಸಮಾಜ ಹಾಗೂ ಕುಟುಂಬದ ಏಳಿಗೆ ಸಾಧ್ಯವಿದೆ ಅದರ ಜತೆ ಮಕ್ಕಳಿಗೆ ಉಜ್ವಲ ಭವಿಷ್ಯ ರೂಪಿಸುವಲ್ಲಿ ಹಾಗೂ ಕುಟುಂಬ ನಿರ್ವಹಣೆಯಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ಹೊಂದಿರುವ ಸ್ತ್ರೀ ಅದನ್ನು ಸರಿದೂಗಿಸಿಕೊಂಡು ಹೋಗುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾಳೆ ಎಂದು ಗದಗ ನಗರದ ಅಲಿ ಪಬ್ಲಿಕ್ ಸ್ಕೂಲ್‌ನ ಪ್ರಾಚಾರ್ಯೆ ಖಾಲೀದಾಸಬ್ರಿನ್ ಗುಳೇದಗುಡ್ಡ ಹೇಳಿದರು. ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಶನಿವಾರ ಆಚರಣೆ ಮಾಡಲಾದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು. ಸ್ತ್ರೀಯರು ಕೇವಲ ಅಡುಗೆ ಮನೆಗೆ ಸೀಮಿತವಾಗಿಲ್ಲಅವರು ಇಂದು ಎಲ್ಲಾ ಕ್ಷೆ?ತ್ರಗಳಲ್ಲಿಯೂ ಪುರುಷರಿಗೆ ಸಮಾನವಾಗಿ ಕಾರ್ಯ ನಿರ್ವಹಿ ಸುತ್ತಿದ್ದಾರೆ. ಹೆಣ್ಣು ಸಮಾಜದಲ್ಲಿ ಗುರುತಿಸಿಕೊಳ್ಳಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಸಮಾಜವು ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದರು. ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯೆ ರೇಣುಕಾ ಧರ್ಮಾಯತ ಮಾತನಾಡಿ, ಮಹಿಳೆ ಭೂಮಿಯಂತೆ ತ್ಯಾಗಮಯಿ.ಭಾರತೀಯ ಸಂಸ್ಕೃತಿಯ ಪ್ರತಿಬಿಂಬವೂ ಹೌದು. ಸಮಾಜದಲ್ಲಿ ಎಲ್ಲರೂ ಆಕೆಯನ್ನು ಪೂಜ್ಯನೀಯ ಭಾವನೆಯಿಂದ ನೋಡಬೇಕು. ಅಷ್ಟೇ ಅಲ್ಲದೆ ಕುಟುಂಬದ ಎಲ್ಲಾ ಸದಸ್ಯರು ಪ್ರಜ್ಞಾವಂತ ನಾಗರಿಕರಾಗಿ ಜೀವಿಸುವಲ್ಲಿ ಸ್ತ್ರೀಯರ ಪಾತ್ರ ಅಮೂಲ್ಯ ವಾದುದು ಎಂದರು.ಕಾಲೇಜಿನ ಪ್ರಾಂಶುಪಾಲ ಎಸ್. ಎಲ್. ಗುಳೇದಗುಡ್ಡ ಮಾತನಾಡಿ, ದೇಶ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅಪಾರ. ಅವರ ಸಕಾರಾತ್ಮಕ ಆಲೋಚನೆಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿದೆ ಎಂದರು.ಈ ವೇಳೇ ಎ???ಸ್‌ಎಸ್ ಕಾರ್ಯಕ್ರಮಾಧಿಕಾರಿ ಶಿವಮೂರ್ತಿ ಕುರೇರ, ಸುನಂದಾ ಮುಂಜಿ, ಕೆ. ಆರ್. ಪಾಟೀಲ, ಅಂಜನಮೂರ್ತಿ ಕೆ. ಎಚ್, ಜಯಶ್ರೀ ಮುತಗಾರ, ನಸರೀನಾಬಾನು ಜಮಾದಾರ, ವಿರೂಪಾಕ್ಷ, ಶಿವಪ್ಪ ಕುರುಬರ, ಅನೀಲಕುಮಾರ, ಎಸ್. ಎಸ್. ಸೂಡಿ, ಅಯ್ಯಪ್ಪ, ವಿ. ಸಿ. ಇಲ್ಲೂರ, ವಿ. ಕೆ. ಸಂಗನಾಳ, ಕಿರಣ ರಂಜಣಗಿ, ಎನ್. ಎಸ್. ಹೊನ್ನೂರ, ಚಂದ್ರು ಸಂಶಿ, ಎಸ್. ಬಿ. ಕಿನ್ನಾಳ, ಬಸವರಾಜ ಎಸ್. ಮಡಿವಾಳರ, ಬಿ. ಕೆ. ಕಂಬಳಿ, ಪ್ರೇಮಾ ಕಾತ್ರಾಳ, ಶಂಕರ ನರಗುಂದ ಇದ್ದರು. ನರೇಗಲ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು