ಜೇನು ಕೃಷಿಯನ್ನು ಅನುಸರಿಸುವುದರಿಂದ ಮಹಿಳೆಯರು ಉತ್ತಮ ಆದಾಯ
Women earn good income by pursuing beekeeping
ವಿಜಯಪುರ 02 : ಜೇನು ಕೃಷಿಯನ್ನು ಅನುಸರಿಸುವುದರಿಂದ ಮಹಿಳೆಯರು ಉತ್ತಮ ಆದಾಯ ಗಳಿಸಬಹುದು ಎಂದು ವಿಜಯಪುರದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಪ್ರಧಾನ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಶ್ರೀಶೈಲ ಕರಭಂಟನಾಳ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗ, ರಸಾಯನಶಾಸ್ತ್ರ ಹಾಗೂ ಗಣಿತ ಅಧ್ಯಯನ ವಿಭಾಗದ ಸಹಯೋಗದೊಂದಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಉಚ್ಛತರ ಶಿಕ್ಷಾ ಅಭಿಯಾನದ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಜೇನು ಸಾಕಾಣಿಕೆಯ ಉಪಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದೆ. ಜೇನುನೊಣಗಳ ವೈವಿಧ್ಯತೆಗೆ ಅನುಗುಣವಾಗಿ ಜೇನಿನ ಉತ್ಪಾದನೆ ಮತ್ತು ಗುಣಮಟ್ಟ ನಿರ್ಧಾರವಾಗುತ್ತದೆ. ಜೇನು ಸಾಕಾಣಿಕೆಯಿಂದ ದೊರೆಯುವ ವ್ಯಾಕ್ಸ್, ಜೇನುತುಪ್ಪ ಹಾಗೂ ರಾಯಲ್ ಜೆಲ್ಲಿ ಓಷಧೀಯ ಗುಣಗಳನ್ನು ಹೊಂದಿದ್ದು, ಅವುಗಳಿಂದ ಉತ್ತಮ ಲಾಭ ಗಳಿಸಬಹುದು ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬಿಎಲ್‌ಡಿಇ ವಿಶ್ವವಿದ್ಯಾಲಯದ ಸಂಖ್ಯಾಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ. ವಿಜಯಾ ಸೊರಗಾಂವಿ ಮಾತನಾಡಿ, ಸಂಶೋಧನೆಗೆ ಅಗತ್ಯವಿರುವ ದತ್ತಾಂಶ ಸಂಗ್ರಹಣೆ ಹಾಗೂ ವಿಶ್ಲೇಷಣೆ ಕುರಿತು ಹೇಳಿದರು.
ಇದೇ ಸಂದರ್ಭದಲ್ಲಿ ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೇಶವಮೂರ್ತಿ ಎಂ.ವಿ. ಮಾತನಾಡಿ, ಪ್ರಾಣಿಗಳಿಂದ ಹರಡುವ ರೋಗಗಳು ಮತ್ತು ಅದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮ ಸಂಯೋಜಕ ಡಾ. ನಟರಾಜ ದುರ್ಗಣ್ಣವರ ಪ್ರಾಸ್ತಾವಿಕನುಡಿಗಳನ್ನಾಡಿದರು. ಪ್ರಾಣಿಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕಿ ತಸ್ಕಿನ್ ನಿರೂಪಿಸಿದರು. ಕ್ರಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಭೋಧಕೇತರ ಸಿಬ್ಬಂದಿಗಳು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಮತ್ತಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 