ಮಹಿಳೆಯರು ಸ್ವಾವಲಂಭಿಗಳಾಗಿ ಬದುಕಿ: ಸಿಇಓ ಮಾನಕರ

ಬಾಗಲಕೋಟೆ 14: ಹೈನುಗಾರಿಕೆ, ಗುಡಿಕೈಗಾರಿಕೆಗಳಲ್ಲಿ ತೊಡಗಿಸಿಕೊಂಡು ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

ತಾಲೂಕಿನ ರಾಂಪೂರ ಗ್ರಾಮ ಪಂಚಾಯತ ವ್ಯಾಪ್ತಿಯ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಜರುಗುದ ಮಹಿಳಾ ಗ್ರಾಮ ಸಭೆಯನ್ನು ಸಸಿ ವಿತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ಸರಕಾರದ ಎಲ್ಲ ಸೌಲಭ್ಯಗಳ್ನು ಪಡೆದುಕೊಳ್ಳಬೇಕು. ಗ್ರಾಮ ಸಭೆಗಳಲ್ಲಿ ಭಾಗವಹಿಸುವ ಮೂಲಕ ಸ್ಥಳೀಯ ಸಕರ್ಾರವನ್ನು ಬಲಪಡಿಸಬೇಕು. ತಾಯಂದಿರು ದೃಡನಿಧರ್ಾರದಿಂದ ಬಾಲ್ಯವಿವಾಹವನ್ನು ತಡೆಗಟ್ಟಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ನಿಲ್ಲಿಸಬೇಕು ಎಂದರು.

ಕೃಷಿಕ ಮಹಿಳೆಯರು ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆಯ ಫಲಾನುಭವಿಗಳಾಘಿ ಆಥರ್ಿಕ ಉನ್ನತೀಕರಣಕ್ಕೆ ಶ್ರಮಿಸಬೇಕು. ಪ್ರತಿ ಮಹಿಳೆ ಸ್ವಚ್ಛಗ್ರಾಮಕ್ಕೆ ಸಹಕರಿಸಿ ಸ್ವಚ್ಛ ಭಾರತದ ಕನಸನ್ನು ಸಾಕಾರಗೊಳಿಸಬೇಕು ಎಂದರು. ವಿವಿಧ ಇಲಾಖೆಗಳ ಯೋಜನೆಗಳ ಲಾಭಗಳನ್ನು ಮಹಿಳೆಯರು ಪಡೆದುಕೊಳ್ಳಬೇಕು. ಮಹಿಳೆಯರು ಶಿಕ್ಷಣದಿಂದ ವಂಚಿತರಾಗಬಾರದು. ಕಡ್ಡಾಯವಾಗಿ ಶಿಕ್ಷಣ ಪಡೆಯಲು ತಿಳಿಸಿದರು. ಇದೇ ಸಂದರ್ಭದಲ್ಲಿ ಮಹಿಳಾ ಕೃಷಿಕರಿಗೆ ಕುರಿಗಾರರ ಔಷಧ ಹಾಗು ಮೇವು ಪೊಟ್ಟಣ ವಿತರಣೆ ಹಾಗೂ ಕೃಷಿ ಸಂಚಿಕೆಯನ್ನು  ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿ.ಪಂ ಸದಸ್ಯೆ ಹನಮವ್ವ ಕರಿಹೋಳಿ, ರಾಂಪೂರ ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಕಾಳಗಿ, ಯೋಜನಾ ನಿದರ್ೇಶಕ ವಿ.ಎಸ್.ಹಿರೇಮಠ, ಸಿಪಿಓ ನಿಂಗಪ್ಪ ಗೋಠೆ, ಕೃಷಿ ಇಲಾಖೆಯ ಉಪನಿದರ್ೇಶಕ ಕೊಂಗವಾಡ, ತೋಟಗಾರಿಕೆ ಉಪನಿದರ್ೇಶಕ ಪ್ರಭುರಾಜ ಹಿರೇಮಠ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕಿ ಎಂ.ಆರ್.ಕಾಮಾಕ್ಷಿ, ಜಿಲ್ಲಾ ಸಾಕ್ಷರಥಾ ಅಧಿಕಾರಿ ಬಸವರಾಜ ಶಿರೂರ, ಅಲ್ಪಸಂಖ್ಯಾತರ ಇಲಾಖೆಯ ಉಪನಿದರ್ೇಶಕ ಎಂ.ಎನ್.ಮೇಲಿನಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.