ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು
Women must become economically and socially empowered.
ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು
ಹೂವಿನಹಡಗಲಿ, ಸೆ. 13: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾಗಬೇಕು ಎಂದು ತಾಲ್ಲೂಕು ಬಣಜಿಗ ಸಮಾಜದ ಸಂಸ್ಥಾಪಕ ಅಧ್ಯಕ್ಷ ಡಾ. ಜಂಬಣ್ಣ ಯಲಗಚ್ಚಿನ ಹೇಳಿದರು. ಪಟ್ಟಣದ ಗವಿಮಠದಲ್ಲಿ ಶನಿವಾರ ನಡೆದ ಗಿರಿಮಲ್ಲಿಗೆ ಮಹಿಳಾ ಸೌಹಾರ್ದ ಸಹಕಾರಿ ಸಂಘದ ಹತ್ತನೇ ವರ್ಷದ ವಾರ್ಷಿಕ ಮಹಾಜನ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಮಹಿಳೆಯರು ಸಹಕಾರಿ ಸಂಸ್ಥೆಗಳಿಂದ ಸಾಲ ಪಡೆದು ಸ್ವಂತ ಉದ್ಯಮಗಳನ್ನು ಆರಂಭಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು. ತಾಲ್ಲೂಕು ಬಣಜಿಗ ಸಮಾಜದ ಅಧ್ಯಕ್ಷ ಮುಂಡವಾಡ ಉಮೇಶ್ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಖಾತೆಗಳನ್ನು ತೆರೆದು ಸಹಕಾರಿ ಸಂಸ್ಥೆಗಳನ್ನು ಬೆಳೆಸಬೇಕು. ದುಡಿದ ಹಣವನ್ನು ಭವಿಷ್ಯದ ದೃಷ್ಟಿಯಿಂದ ಸಹಕಾರಿ ಸಂಘಗಳಲ್ಲಿ ಹೂಡಿಕೆ ಮಾಡಬೇಕು ಎಂದು ಹೇಳಿದರು.
ಗಿರಿಮಲ್ಲಿಗೆ ಮಹಿಳಾ ಸೌಹಾರ್ದ ಸಹಕಾರಿಯ ಅಧ್ಯಕ್ಷೆ ಸವಿತಾ ಅಂಗಡಿ ಮಾತನಾಡಿ, ಉತ್ತಮ ಆರ್ಥಿಕ ಶಿಸ್ತು ಪಾಲಿಸುವ ಮೂಲಕ ಪಾರದರ್ಶಕ ಹಾಗೂ ಜವಾಬ್ದಾರಿಯುತ ಆಡಳಿತ ನಡೆಸುವ ಸಂಕಲ್ಪ ಹೊಂದಿರುವುದಾಗಿ ತಿಳಿಸಿದರು. ನಿರ್ದೇಶಕರಾದ ಸೌಮ್ಯ ತುರಕಾಣಿ, ವಿಜಯಾ ಕದ್ರಿ, ಮಂಗಳಾ ವಾಲಿ, ಭುವನೇಶ್ವರಿ ಅಂಗಡಿ, ಲಲಿತಾ ಕೋರಿ, ಶಾಂತಾ ಅಲೂರು ಮತ್ತಿತರರು ಭಾಗವಹಿಸಿದ್ದರು. ನಿರ್ದೇಶಕಿ ನಾಗರತ್ನ ಕುಂಚೂರು ಸ್ವಾಗತಿಸಿದರು. ಸವಿತಾ ಕುಂಬಾರಿ ಕಾರ್ಯಕ್ರಮ ನಿರ್ವಹಿಸಿದರು. ಸಮಾಜದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 