ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ಬಸ್ ತಡೆದು ಪ್ರತಿಭಟನೆ ನಡೆಸಿದ ಮಹಿಳೆಯರು
Women protested by stopping the bus to ensure it leaves on time
ಲಕ್ಷ್ಮೇಶ್ವರ " 30: ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ತಡೆದು ಮಹಿಳೆಯರು ಬಿರು ಬಿಸಿಲನ್ನು ಲೆಕ್ಕಿಸದೆ ದಿಡೇರನೆ ಪ್ರತಿಭಟನೆ ನಡೆಸಿ ಸಾರಿಗೆ ಘಟಕದ ವಿರುದ್ಧ ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದ ಮಹಿಳೆಯರು 12 -45ಕ್ಕೆ ಮೇವುಂಡಿ ಮಾರ್ಗಕ್ಕೆ ಬಿಡುವ ಬಸ್ , ಮಧ್ಯಾಹ್ನ 3 -45 ಆದರೂ ಸಹ ಬಸ್ ಬಿಡುತ್ತಿಲ್ಲ ಮಕ್ಕಳು ಮರಿಗಳನ್ನು ಕಟ್ಟಿಕೊಂಡು ನಾವು ಪೇಟೆಗೆ ಬಂದಿರುತ್ತೇವೆ ಹೀಗೆ ಎರಡು ಮೂರು ತಾಸು ಗಂಟೆ ಬಸ್ ನಿಲ್ದಾಣದಲ್ಲಿ ಕಾದರೆ ನಮ್ಮ ಮುಂದಿನ ಬದುಕು ಹೆಂಗೆ ನಮ್ಮೂರ ಅಂದರೆ ಇಷ್ಟು ನಿರ್ಲಕ್ಷಣಾ ಎಂದು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.
ಕಾಲೇಜ್ ವಿದ್ಯಾರ್ಥಿಗಳು ಸಹ ನಮ್ಮ ಕುಂದ್ರಳ್ಳಿ ತಾಂಡಕ್ಕೆ ಹೋಗಲು ಸರಿಯಾದ ಸಮಯಕ್ಕೆ ಬಸ್ ಬಿಡುತ್ತಿಲ್ಲ ಬಸ್ ಯಾವಾಗ ಬರುತ್ತದೆ ಎಂದು ಕೇಳಿದರೆ ಬರುತ್ತದೆ ಎಂದು ಹೇಳುತ್ತಾರೆ ವಿನಹ ಸಮಯಕ್ಕೆ ಸರಿಯಾಗಿ ಬಸ್ ಬರುವುದಿಲ್ಲ ನಮ್ಮ ಗೋಳು ಯಾರ ಮುಂದೆ ಹೇಳಬೇಕು ಎಂದು ವಿದ್ಯಾರ್ಥಿಗಳು ಸಹ ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು ಪ್ರತಿಭಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಿಬಿಐ ಬಿವ್ಹಿ ನ್ಯಾಮಗೌಡ ಅವರು ಪ್ರತಿಭಟನಾಕಾರದೊಂದಿಗೆ ಮಾತನಾಡಿ ಮಹಿಳೆಯರನ್ನು ಸಮಾಧಾನ ಪಡಿಸಿದರು ನಂತರ ಕಂಟ್ರೋಲರ್ನ್ನು ಕರೆದು ಬೇವುಂಡಿ ಮಾರ್ಗಕ್ಕೆ ಬಸ್ ಬಿಡಿಸಿದರು ಇದರಿಂದ ಮಹಿಳೆಯರು ಪ್ರತಿಭಟನೆ ಕೈ ಬಿಟ್ಟು ಪ್ರಯಾಣ ಬೆಳೆಸಿದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 