ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕ ಅಭಿವೃದ್ಧಿ ಸಾಧಿಸಬೇಕು : ಪಿಡಿಒ ಶಿಲ್ಪರಾಣಿ
Women should achieve economic development through self-employment: PDO Shilparani
ಕಂಪ್ಲಿ 02: ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕ ಅಭಿವೃದ್ಧಿ ಸಾಧಿಸಬೇಕು. ಆ ಮೂಲಕ ಸ್ವಾವಲಂಬಿಗಳಾಗಿ ಜೀವನ ನಿರ್ವಹಿಸಲು ಸಾಧ್ಯ ಎಂದು ಪಿಡಿಒ ಶಿಲ್ಪರಾಣಿ ಹೇಳಿದರು. ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ಹಳೇ ಪಂಚಾಯಿತಿಯಲ್ಲಿ ಸಂಜೀವಿನಿ ಮುದ್ದಾಪುರ ಗ್ರಾಪಂ ಮಟ್ಟದ ಮಹಿಳಾ ಒಕ್ಕೂಟದ ನೇತೃತ್ವದಲ್ಲಿ ಗ್ರಾಪಂ ಸಹಯೋಗದಲ್ಲಿ ಆಯೋಜಿಸಿದ್ದ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ ಹಾಗೂ ಮಾದಕ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಸ್ತ್ರೀ-ಶಕ್ತಿ ಸೇರಿದಂತೆ ಒಕ್ಕೂಟದ ಮಹಳೆಯರು ಸರಕಾರದ ಸಾಲ-ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಸ್ವ-ಉದ್ಯೋಗ ಕೈಗೊಳ್ಳಬೇಕು.
ಆ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು. ಒಕ್ಕೂಟದ ಅಧ್ಯಕ್ಷೆ ಶಕುಂತಲಮ್ಮ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಇಂದಿನ ದಿನಮಾನದಲ್ಲಿ ಮಹಿಳೆಯರು ಮುಖ್ಯವಾಹಿನಿಗೆ ಬರುತ್ತಿದ್ದಾರೆ. ಶಿಕ್ಷಣದೊಂದಿಗೆ ಮತ್ತು ಸ್ವ-ಉದ್ಯೋಗದೊಂದಿಗೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಮುಂದಾಗಬೇಕು ಎಂದರು. ಮಂಜುಳಾ ಅವರು ವಾರ್ಷಿಕ ಸಾಮಾನ್ಯ ಸಭೆಯ ವರದಿಯನ್ನು ಮಂಡಿಸಿದರು. ತದನಂತರ ವಿವಿಧ ಸ್ಪರ್ಧೆಯಲ್ಲಿ ವಿಜೇತ ಮಹಿಳೆಯರಿಗೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ಸುಧಾ, ಪಂಚಾಯಿತಿಯ ಅಧ್ಯಕ್ಷೆ ಸೋಮೇಶ್ವರಿ ಪರಶುರಾಮ, ಉಪಾಧ್ಯಕ್ಷೆ ಜಡೆ ಸಾವಿತ್ರಮ್ಮ ಮಹಾದೇವಪ್ಪ, ತಾಲೂಕು ಮಹಿಳಾ ಒಕ್ಕೂಟದ ಸಂಯೋಜಕಿ ಪಾರ್ವತಿ ಸೇರಿದಂತೆ ಮಹಿಳೆಯರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 