ಮಹಿಳೆಯರು ದೇಶದ ಆರ್ಥಿಕತೆಯ ಪ್ರಮುಖ ಶಕ್ತಿಯಾಗಬೇಕು : ಶಂಕರಗೌಡ ಸೋಮನಾಳ ಹೇಳಿದರು.
Women should become a major force in the country's economy: Shankaragowda Somanala said.
ಲೋಕದರ್ಶನ ವರದಿ
ಮಹಿಳೆಯರು ದೇಶದ ಆರ್ಥಿಕತೆಯ ಪ್ರಮುಖ ಶಕ್ತಿಯಾಗಬೇಕು : ಶಂಕರಗೌಡ ಸೋಮನಾಳ ಹೇಳಿದರು.
ವಿಜಯಪುರ 11: ಕೃಷಿ, ರಕ್ಷಣೆ, ಹೊಟೇಲ್ ಉದ್ಯಮ, ಸಾಫ್ಟ್‌ವೇರ್ ಮುಂತಾದ ಪ್ರಮುಖ ಕ್ಷೇತ್ರಗಳಲ್ಲಿ ಭಾರತವು ಆತ್ಮನಿರ್ಭರವಾಗಬೇಕು ಎಂಬುದು ಪ್ರಸ್ತುತ ಅಗತ್ಯವಾಗಿದ್ದು, ಮಹಿಳೆಯರು ದೇಶದ ಆರ್ಥಿಕತೆಯ ಪ್ರಮುಖ ಶಕ್ತಿಯಾಗಬೇಕು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜೈವಿಕ ಮಾಹಿತಿ ಅಧ್ಯಯನ ವಿಭಾಗ ಹಾಗೂ ಇತಿಹಾಸ ಅಧ್ಯಯನ ವಿಭಾಗದ ಸಹಯೋಗದೊಂದಿಗೆ ಪ್ರಧಾನ ಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ ಪಿ. ಎಮ್. ಉಷಾ ಉನ್ನತ ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ನೆರವಿನೊಂದಿಗೆ ಇತ್ತೀಚಿಗೆ ಹಮ್ಮಿಕೊಂಡಿದ್ದ “ಆತ್ಮನಿರ್ಭರ ಭಾರತದಲ್ಲಿ ಮಹಿಳಾ ಉದ್ಯಮಶೀಲತೆ ಅವಕಾಶಗಳು, ಕೌಶಲ್ಯಗಳು ಮತ್ತು ಕಾರ್ಯತಂತ್ರಗಳು” ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜೈವಿಕ ಮಾಹಿತಿ, ಜೈವಿಕ ತಂತ್ರಜ್ಞಾನ ಹಾಗೂ ಇತಿಹಾಸ ವಿಭಾಗಗಳ ವಿದ್ಯಾರ್ಥಿನಿಯರು ಈ ತರಬೇತಿಯ ಸದುಪಯೋಗ ಪಡೆದು ತಮ್ಮ ಬದುಕಿನಲ್ಲಿ ಉದ್ಯಮಶೀಲತೆ ಬೆಳೆಸಿಕೊಳ್ಳಬೇಕು, ಅಷ್ಟೇ ಅಲ್ಲದೇ ಕೌಶಲ್ಯಾಭಿವೃದ್ಧಿ ಮೂಲಕ ಮಹಿಳೆಯರು ಹೊಸ ಉದ್ಯಮ ಹಾಗೂ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದಾದ ಅಪಾರ ಸಾಧ್ಯತೆಗಳಿವೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ.ಬಸವರಾಜ ಮೇಟಿ ಮಾತನಾಡಿ, ವಿದ್ಯಾರ್ಥಿನಿಯರು ಇಂದಿನ ಯುಗದಲ್ಲಿ ಕೇವಲ ಸರ್ಕಾರಿ ಉದ್ಯೋಗಕ್ಕೆ ಸೀಮಿತವಾಗದೆ ಉದ್ಯಮಿಗಳಾಗಲು ಮುಂದಾಗಬೇಕು. ದೇಶಕ್ಕೆ ಸ್ವಾತಂತ್ರ್ಯ ದೊರೆತು ಏಳು ದಶಕಗಳಾದರೂ, ರಕ್ಷಣಾ ಉತ್ಪಾದನೆ, ಆಹಾರ ಭದ್ರತೆ, ತಂತ್ರಜ್ಞಾನ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾವು ಇನ್ನೂ ಬೇರೆ ದೇಶಗಳ ಮೇಲೆಯೇ ಅವಲಂಬಿತರಾಗಿದ್ದೇವೆ, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ‘ಆತ್ಮನಿರ್ಭರ ಭಾರತ’ ಅಭಿಯಾನವನ್ನು ಆರಂಭಿಸಿದೆ, ಉತ್ತಮ ಕೌಶಲ್ಯಗಳೊಂದಿಗೆ ವಿದ್ಯಾರ್ಥಿನಿಯರು ನವೋದ್ಯಮ ಮತ್ತು ಹೊಸ ಯೋಜನೆಗಳನ್ನು ಪ್ರಾರಂಭಿಸಲು ಧೈರ್ಯದಿಂದ ಮುಂದಾಗಬೇಕೆಂದರು. ಇಂದಿಗೂ ದೇಶದಲ್ಲಿ ಪ್ರಾರಂಭವಾಗಿರುವ ಅನೇಕ ಎಮ್‌ಎಸ್‌ಎಮ್‌ಇಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಕೇವಲ 12 ಶೇಕಡಾ ರಷ್ಟಿದೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ಡಾ. ಜಾಯ್. ಹೊಸಕೆರಿ, ಡಾ.ಎಮ್.ಎಸ್. ಮುಜಾವರ, ಡಾ.ಚಂದ್ರಕಲಾ ಹಳ್ಳಿ, ಗುರುರಾಜ ಬಮ್ಮನಹಳ್ಳಿ, ಹಾಗೂ ಸಂಶೋಧನಾ ವಿಧ್ಯಾರ್ಥಿಗಳು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕ ಮತ್ತು ಜೈವಿಕ ಮಾಹಿತಿ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಬಾಬು. ಆರ್. ಎಲ್. ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ನಾಗರಾಜ ಎಮ್. ವಂದಿಸಿದರು. ಸಂಶೋಧನಾ ವಿದ್ಯಾರ್ಥಿನಿ ಆಸ್ಮಾ ಬೇದರೆಕರ ನಿರೂಪಿಸಿದರು.
ಪೋಟೋ ಕ್ಯಾಪ್ಷನ್:
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರದ ಜೈವಿಕ ಮಾಹಿತಿ ಅಧ್ಯಯನ ವಿಭಾಗ ಹಾಗೂ ಇತಿಹಾಸ ಅಧ್ಯಯನ ವಿಭಾಗದ ಸಹಯೋಗದೊಂದಿಗೆ ಇತ್ತೀಚಿಗೆ ಹಮ್ಮಿಕೊಂಡಿದ್ದ “ಆತ್ಮನಿರ್ಭರ ಭಾರತದಲ್ಲಿ ಮಹಿಳಾ ಉದ್ಯಮಶೀಲತೆ ಅವಕಾಶಗಳು, ಕೌಶಲ್ಯಗಳು ಮತ್ತು ಕಾರ್ಯತಂತ್ರಗಳು” ಕುರಿತ ಒಂದು ದಿನದ ಕಾರ್ಯಾಗಾರವನ್ನು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಗಣ್ಯರು ಉದ್ಘಾಟಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 