ಮಹಿಳೆಯರು ತಂತ್ರಜ್ಞಾನ ಮತ್ತು ಸಂಶೋಧನೆಯಲ್ಲಿ ಮುಂದೆ ಬರಬೇಕು
Women should come forward in technology and research
ಲೋಕದರ್ಶನ ವರದಿ
ವಿಜಯಪುರ 13: ಸ್ವತಂತ್ರ ಪೂರ್ವದ ಸೀಮಿತ ಶಿಕ್ಷಣದಿಂದ ಇಂದಿನ ತಂತ್ರಜ್ಞಾನ ಆಧಾರಿತ ಶಿಕ್ಷಣದವರೆಗೆ ಬಂದಿರುವ ಬದಲಾವಣೆಗಳು ಮಹಿಳೆಯರಿಗೆ ಹೊಸ ಅವಕಾಶಗಳನ್ನು ನೀಡಿವೆ, ಆದ್ದರಿಂದ ಅವರು ತಂತ್ರಜ್ಞಾನವನ್ನು ಉಪಯೋಗಿಸಿ ಸಂಶೋಧನೆಯಲ್ಲಿ ಮುಂದಾಳತ್ವ ವಹಿಸಬೇಕು ಎಂದು ಮಾಜಿ ಕುಲಸಚಿವ ಎಮ್.ಎನ್.ಚೋರಗಸ್ತಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರ, ಜೈವಿಕ ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ವಿಷನ್ ಗ್ರೂಪ್ ಆಪ್ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಇವರ ಪ್ರಾಯೋಜತ್ವದ ಅಡಿಯಲ್ಲಿ ಐದು ದಿನಗಳ “ಪ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಮ್ ಇನ್ ಕಾಂಪಿಟೇಷನಲ್ ಬಯಾಲಾಜಿ ಮತ್ತು ಮಾಲಿಕ್ಯೂಲರ್ ಬಯಾಲಜಿ ಟೆಕ್ನಿಕ್ಸ್” ಎಂಬ ವಿಷಯದ ಕುರಿತ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ಮಹಿಳಾ ಮೀಸಲಾತಿಯನ್ನು ಸದ್ವಿನಿಯೋಗ ಮಾಡಿಕೊಂಡು ಉನ್ನತ ಹುದ್ದೆಗಳನ್ನು ಪಡೆಯಬೇಕು ಮತ್ತು ವಿದ್ಯಾರ್ಥಿನಿಯರಿಗೂ ಇದರ ಮಹತ್ವವನ್ನು ತಿಳಿಸಬೇಕು. ಜೊತೆಗೆ, ವಿಶ್ವವಿದ್ಯಾನಿಲಯದಲ್ಲಿ ಹೆಚ್ಚು ವೃಕ್ಷಗಳನ್ನು ನೆಟ್ಟು ಹಸಿರು ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.
ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ್ ಮಾತನಾಡಿ, ಶಿಕ್ಷಕರು ತಮ್ಮ ಬೋಧನೆಯಲ್ಲಿ ಬೋಧನಾ ಪದ್ಧತಿ ಮತ್ತು ವಿಷಯ ಸಂಪತ್ತನ್ನು ಸಮನ್ವಯಗೊಳಿಸಿ ಪಾಠ ಮಾಡಬೇಕು. ಜಗತ್ತಿನಲ್ಲಿ ಸಂಶೋಧನಾ ಪ್ರಕಟಣೆಯಲ್ಲಿ ಭಾರತವು ಮೂರನೇ ಸ್ಥಾನದಲ್ಲಿರುವುದನ್ನು ಉಲ್ಲೇಖಿಸಿ, ಸಂಶೋಧನೆ ಕೇವಲ ಪ್ರಕಟಣೆಗಷ್ಟೇ ಸೀಮಿತವಾಗದೆ, ಕಾರ್ಯರೂಪಕ್ಕೆ ಬಂದು ಸಮಾಜಕ್ಕೆ ಉಪಯೋಗವಾಗಬೇಕು. ಇದಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಹೆಚ್ಚು ಹೆಚ್ಚು ಬಳಸಿಕೊಳ್ಳುವ ಅಗತ್ಯವಿದೆ ಎಂದರು. ಕಾರ್ಯಕ್ರಮದ ಸಂಯೋಜಕರಾದ ಡಾ.ಬಾಬು ಆರ್.ಎಲ್ ಅತಿಥಿಗಳನ್ನು ಪರಿಚಯಿಸಿದರು ಮತ್ತು ಐದು ದಿನಗಳ ಕಾರ್ಯಕ್ರಮದ ವರದಿ ವಾಚನ ಮಾಡಿದರು. ಡಾ.ಜಾಯ್ ಹೊಸ್ಕೇರಿ ವಂದಿಸಿದರು. ಸಂಶೋಧನಾ ವಿದ್ಯಾರ್ಥಿನಿ ಪ್ರೀತಿ ಗದಾಳ ನಿರೂಪಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 