ಮಹಿಳೆಯರು ನಾಯಕತ್ವ ಗುಣ ಬೆಳೆಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಬೇಕು: ರೇಖಾ
Women should cultivate leadership qualities and become financially independent: Rekha
ಶಿಗ್ಗಾವಿ, ಜು.11: ಗ್ರಾಮೀಣ ಮಹಿಳೆಯರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಆಯೋಜಿಸಲಾಗುವ ಸ್ವಉದ್ಯೋಗ ಪ್ರೇರಣಾ ಶಿಬಿರಗಳು ಅತ್ಯಂತ ಮಹತ್ವದ್ದಾಗಿವೆ ಎಂದು ಎಸ್.ಕೆ.ಡಿ.ಆರಿ್ಡ.ಪಿ. ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಖಾ ಹೇಳಿದರು. ತಾಲೂಕಿನ ಬಸನಾಳ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ನಡೆದ ಸ್ವಉದ್ಯೋಗ ಪ್ರೇರಣಾ ಶಿಬಿರದಲ್ಲಿ ಮಾತನಾಡಿದ ಅವರು, ಮಹಿಳೆಯರು ಸ್ವಂತ ಉದ್ಯೋಗ ಆರಂಭಿಸಲು ಅಗತ್ಯವಾದ ಮಾಹಿತಿ, ಸ್ವಸಹಾಯ ಸಂಘಗಳ ಮೂಲಕ ಲಭ್ಯವಿರುವ ವಿವಿಧ ಸಾಲ ಸೌಲಭ್ಯಗಳು ಹಾಗೂ ವೃತ್ತಿಪರ ತರಬೇತಿಗಳ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಗ್ರಾಮದ ಮುಖಂಡ ಉಮೇಶ್ ವಿಜಾಪುರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ವಂತ ಉದ್ಯೋಗ ಆರಂಭಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪ್ರಿಯಾ ಖೋದಾನಪುರ ಅವರು, ಮಹಿಳೆಯರಿಗೆ ಧರ್ಮಸ್ಥಳ ಸಂಘದ ಸ್ವಉದ್ಯೋಗ ಯೋಜನೆಗಳು ಹಾಗೂ ಮನೆಯಲ್ಲಿ ತಯಾರಿಸಬಹುದಾದ ವಿವಿಧ ಉತ್ಪನ್ನಗಳ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಕಲಾವತಿ, ಸೇವಾ ಪ್ರತಿನಿಧಿ ಜ್ಯೋತಿ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 