ಮಹಿಳೆಯರು ಉಳಿತಾಯ ಮಾಡುವ ಮನೋಭಾವನೆ ಬೆಳೆಸಿಕೋಳ್ಳಿ
Women should develop a saving attitude
ಕಾರವಾರ 17: ಜಿಲ್ಲಾ ಪಂಚಾಯತ್ ಮತ್ತು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ, 6 ದಿನಗಳ ಹಣಕಾಸು ಸಾಕ್ಷರತೆಗೆ ಸಂಬಂಧಿಸಿದ ತರಬೇತಿಯು ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾದಲ್ಲಿ ಇತ್ತಿಚಿಗೆ ನಡೆಯಿತು.
ಕಾರವಾರ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ವ್ಯವಸ್ಥಾಪಕ ಡಿ. ನಾಗಾರಾಜ ರೆಡ್ಡಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿ, ಇಂದಿನ ದಿನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಬ್ಯಾಂಕ್ನ ಅವಶ್ಯಕತೆ ಇದೆ. ಇದರಲ್ಲಿ ಮಹಿಳೆಯರ ಪಾತ್ರ ಅಮೂಲ್ಯವಾದುದು, ಬ್ಯಾಂಕ್ನಲ್ಲಿ ಅನೇಕ ರೀತಿಯ ಯೋಜನೆಗಳಿವೆ, ಇದನ್ನು ನಿಮ್ಮ ವ್ಯಾಪ್ತಿಯಲ್ಲಿ ಬರುವ ಸ್ವ ಸಹಾಯ ಸಂಘದ ಮಹಿಳೆಯರಿಗೆ ಮಾಹಿತಿಯನ್ನು ನೀಡಬೇಕು ಜೊತೆಗೆ ಉಳಿತಾಯ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.
ತರಬೇತಿ ಸಂಸ್ಥೆಯ ನಿರ್ದೆಶಕ ರಾಜು ಕಲ್ಲಪ್ಪ , ಬ್ಯಾಂಕ್ನ ಸೇವೆಯನ್ನು ಪ್ರತಿಯೊಬ್ಬರಿಗೂ ತಲುಪುವ ದೃಷ್ಠಿಯಿಂದ ಸರ್ಕಾರ ಪ್ರತಿ ಗ್ರಾಮ ಪಂಚಾಯತಗೆ ಒಂದು ಮಹಿಳೆಯನ್ನು ಆರ್ಥಿಕ ಸಾಕ್ಷರತಗೆ ಸಂಬಂಧಿಸಿದ ವಿಷಯದ ಬಗ್ಗೆ ಮಾಹಿತಿಯನ್ನು ನೀಡಲು ಸ್ವ ಸಹಾಯ ಸಂಘದ ಮಹಿಳೆಯನ್ನು ಗ್ರಾಮೀಣ ಮಟ್ಟದಲ್ಲಿ ಮಾಹಿತಿ ನೀಡಲು ಸಮುದಾಯ ಸಂಪನ್ಮೂಲ ವ್ಯಕ್ತಿಯನ್ನಾಗಿ ಆಯ್ಕೆಮಾಡಿ ಆರು ದಿನ ತರಬೇತಿಯನ್ನು ನೀಡಿದ್ದೇವೆ, ಸರ್ಕಾರದ ಯೋಜನೆ ಎಲ್ಲರಿಗೂ ತಲುಪಿಸಬೇಕೆಂದರು.
ಈ ಸಂದರ್ಭದಲ್ಲಿ ಜೋಯಿಡಾ ಎನ್‌ಆರ್‌ಎಲ್‌ಎಮ್ ಇಲಾಖೆ ಮೇಲ್ವಿಚಾರಕ ಸಂತೋಷ ಪಾಟೀಒ, ಹೊನ್ನಾವರ ಎನ್‌ಆರ್‌ಎಲ್‌ಎಮ್ ಇಲಾಖೆಯ ಮೇಲ್ವಿಚಾರಕಿ ಮೇಘನಾ ಭಟ್ಟ ಉಪಸ್ಥಿತರಿದ್ದರು. ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಗೌರೀಶ ನಾಯ್ಕ ಸ್ವಾಗತಿಸಿದರು. ಮಮತಾ ನಾಯ್ಕ ವಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 