ಕರ್ತವ್ಯದ ಸ್ಥಳ ಸೇರಿದಂತೆ ಎಲ್ಲೆಡೆ ಮಹಿಳೆಯರಿಗೆ ಸುರಕ್ಷಿತ ಹಾಗೂ ಗೌರವಯುತ ವಾತಾವರಣ ಸೀಗಬೇಕು: ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

ಕರ್ತವ್ಯದ ಸ್ಥಳ ಸೇರಿದಂತೆ ಎಲ್ಲೆಡೆ ಮಹಿಳೆಯರಿಗೆ ಸುರಕ್ಷಿತ ಹಾಗೂ ಗೌರವಯುತ ವಾತಾವರಣ ಸೀಗಬೇಕು: ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ Women should have a safe and respectful environment everywhere, including at the place of work: Wome

ಲೋಕದರ್ಶನ ವರದಿ 

ಧಾರವಾಡ 18: ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ಮತ್ತು ಗೌರವಯುತ ವಾತಾವರಣ ನಿರ್ಮಾಣವಾಗಬೇಕು. ಮತ್ತು ಮಹಿಳೆಯರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯದಿಂದ ಇದ್ದಾಗ ಮಾತ್ರ ಆತ್ಮಸ್ಥೈರ್ಯದಿಂದ ತಮ್ಮ ಕೆಲಸವನ್ನು ಸಮರ​‍್ಕವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಹದ್ಯೋಗಿಗಳ ಮತ್ತು ಸಾರ್ವಜನಿಕರ ಸಹಕಾರ ಮುಖ್ಯವಾಗಿದ್ದು, ಇಲಾಖೆಯ ಅಧಿಕಾರಿಗಳು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಅವರು ಹೇಳಿದರು. 

ಅವರು ಇಂದು ಬೆಳಿಗ್ಗೆ  ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಕರ್ತವ್ಯದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ದೌರ್ಜನ್ಯ (ನಿರೋಧ, ನಿರ್ಬಂಧನೆ ಹಾಗೂ ನಿವಾರಣೆ-ಕಓಖಊ)  ಅಧಿನಿಯಮ 2013 ರ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಇತ್ತೀಚಿನ ದಿನಗಳಲ್ಲಿ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಹಾಗೂ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ಸಂಸ್ಥೆಯಲ್ಲೂ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಹಿಳೆಯರ ದೂರುಗಳನ್ನು ಗೌಪ್ಯವಾಗಿ ಸ್ವೀಕರಿಸಲು ಶೀ ಬಾಕ್ಸ್‌ (ಖಜ ಃಠ) ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು. 

ಮಹಿಳೆಯರು ತಮ್ಮ ಮೇಲೆ ನಡೆಯುವ ಯಾವುದೇ ರೀತಿಯ ಅನ್ಯಾಯ, ಕಿರುಕುಳ ಅಥವಾ ದೌರ್ಜನ್ಯಗಳನ್ನು ಮೌನವಾಗಿ ಸಹಿಸಿಕೊಳ್ಳದೇ, ಧೈರ್ಯವಾಗಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಜೊತೆಗೆ ಘಟನೆಗಳ ಬಗ್ಗೆ ದೂರು ದಾಖಲಿಸಲು ಮುಂದಾಗಬೇಕು ಎಂದು ಅವರು ಹೇಳಿದರು. 

ಸಮಾಜದಲ್ಲಿ ಮಹಿಳೆಯರ ಗೌರವ ಮತ್ತು ಸುರಕ್ಷತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಹಿಳೆಯರಿಗೆ ಸುರಕ್ಷಿತ ಕೆಲಸದ ವಾತಾವರಣ ಒದಗಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವೆಂದು ಅವರು ತಿಳಿಸಿದರು. 

ಧಾರವಾಡ ಜಿಲ್ಲೆಯಲ್ಲಿ ಪೊಲೀಸರು ಮಹಿಳಾ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದು ತಿಳಿದು ಬಹಳ ಸಂತೋಷವಾಗಿದೆ. ಮಹಿಳೆಯರ ಸುರಕ್ಷತೆ, ಗೌರವ ಮತ್ತು ನ್ಯಾಯಕ್ಕಾಗಿ ಪೊಲೀಸರು ಕೈಗೊಳ್ಳುತ್ತಿರುವ ಕ್ರಮಗಳು ಸಮಾಜದಲ್ಲಿ ವಿಶ್ವಾಸ ಮೂಡಿಸುತ್ತಿವೆ. ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ, ಅವರೊಂದಿಗೆ ಆತ್ಮೀಯವಾಗಿ ನಡೆದುಕೊಳ್ಳುತ್ತಿರುವ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು. 

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ ಅವರು ಮಾತನಾಡಿ, ಯಾವುದೇ ಸರಕಾರಿ, ಖಾಸಗಿ ಕಚೇರಿಗಳು ಮತ್ತು ಕೈಗಾರಿಕೆಗಳಲ್ಲಿ ಹತ್ತು ಮತ್ತು ಹತ್ತಕ್ಕಿಂತ ಹೆಚ್ಚು ದುಡಿಯುವ ಮಹಿಳೆಯರು ಇದ್ದಲ್ಲಿ ಕಡ್ಡಾಯವಾಗಿ ಶೀ ಬಾಕ್ಸ್‌ ಅಳವಡಿಸಬೇಕು. ಅಲ್ಲಿನ ಮಹಿಳೆಯರು ತಮಗೆ ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಉಂಟಾದರೆ ಶೀ ಬಾಕ್ಸ್‌ದಲ್ಲಿ ಹಾಕಬೇಕು ಎಂದು ಅವರು ಹೇಳಿದರು.  

ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಮಹಿಳೆಯರ ಮೇಲೆ ಯಾವುದೇ ರೀತಿಯ ಶೋಷಣೆ, ಲೈಂಗಿಕ ಕಿರುಕುಳ ಅಥವಾ ಅನ್ಯಾಯ ನಡೆದಿದ್ದರೆ ಅದನ್ನು ಮೌನವಾಗಿ ಸಹಿಸಿಕೊಳ್ಳದೆ ಧೈರ್ಯದಿಂದ ಎದುರಿಸಿ ಪೊಲೀಸ್ ಇಲಾಖೆಗೆ ತಿಳಿಸಬೇಕು ಎಂದು ಅವರು ತಿಳಿಸಿದರು. 

 ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ಮತ್ತು ಗೌರವಯುತ ವಾತಾವರಣ ಕಲ್ಪಿಸುವುದು ಪ್ರತಿಯೊಂದು ಸಂಸ್ಥೆಯ ಜವಾಬ್ದಾರಿಯಾಗಿದೆ, ಉನ್ನತ ದರ್ಜೆಯ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಯ ಸಮಸ್ಯೆಗಳು, ಸುರಕ್ಷತೆ ಹಾಗೂ ಮಾನಸಿಕ ನೆಮ್ಮದಿಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು. 

ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಶೋಷಣೆಯನ್ನು ತಡೆಯಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದ್ದು, ದೂರು ನೀಡುವ ಮಹಿಳೆಯರ ಗೌಪ್ಯತೆ ಕಾಪಾಡಲಾಗುತ್ತದೆ. ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿ, ಅನ್ಯಾಯದ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತಬೇಕು ಎಂದು ಅವರು ತಿಳಿಸಿದರು. 

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್‌.ಎಚ್‌.ಕುಕನೂರ ಅವರು ಸ್ವಾಗತಿಸಿ,  ಪ್ರಸ್ತಾಪವಾಗಿ ಮಾತನಾಡಿದರು.  

ವೇದಿಕೆಯಲ್ಲಿ  ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಗೊಂಜನ್ ಆರ್ಯ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಉಪ ನಿರ್ದೇಶಕ  ಬಿ .ಎಚ್‌. ಕೃಷ್ಣಪ್ಪ,  ಸ್ಥಳೀಯ ದೂರು ನಿವಾರಣ ಸಮಿತಿಯ ಅಧ್ಯಕ್ಷೆ ಡಾ.ಸಂಗೀತ ಮಾನೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ನ್ಯಾಯವಾಧಿ ಆಶಾ ಪ್ರಳಯಕಲ್ಮಠ ಅವರು ಇದ್ದರು. 

ಕಾರ್ಯಕ್ರಮದಲ್ಲಿ ಎಲ್ಲ ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಇಲಾಖೆಯ ಸಿಬ್ಬಂದಿ ವರ್ಗದವರು ಉಪಸಿತರಿದ್ದರು.