ಮಹಿಳೆಯರು ಶಿಕ್ಷಣ ವಂಚಿತರಾಗಬಾರದು: ಕೋಟೆಪ್ಪ ಕಾಂಬಳೆ

ಮಹಿಳೆಯರು ಶಿಕ್ಷಣ ವಂಚಿತರಾಗಬಾರದು: ಕೋಟೆಪ್ಪ ಕಾಂಬಳೆ Women should not be deprived of education: Kotappa Kambale


ಇಂಡಿ 27: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಸಬಲೀಕರಣಕ್ಕಾಗಿ ಜ್ಞಾನ ವಿಕಾಸ ಯೋಜನೆ ಜಾರಿಗೆ ತಂದಿದ್ದು, ಇದರಿಂದ ಲಕ್ಷಾಂತರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ ಎಂದು ಕೋಟಪ್ಪ ಕಾಂಬಳೆ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಜೆಎಮ್‌ಎಫ್‌ಸಿ ಇಂಡಿ ಹಾಗೂ ಅಧ್ಯಕ್ಷರು ತಾಲೂಕು ಕಾನೂನು ಸೇವೆಗಳ ಸಮಿತಿ ಇಂಡಿ ಅವರು ಹೇಳಿದರು. 

 ಅವರು ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದ ಜೇಟ್ಟಿಗೆಶ್ವರ ದೇವಾಲಯ ಆವರಣದಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಮಹಿಳೆಯರು ಶಿಕ್ಷಣದಿಂದ ವಂಚಿತರಾಗಬಾರದು. ಮಹಿಳೆಯರು ಶಿಕ್ಷಣವಂತರು ಆದರೆ ಮಾತ್ರ ಈ ಸಮಾಜದಲ್ಲಿ ಇರುವ ಅಂಕ ಡೊಕ್ಕಗಳನ್ನು ತಿದ್ದಲು ಸಾಧ್ಯ ಹಾಗೂ ಸಮಾಜದಲ್ಲಿ ಹೆಣ್ಣು ಗಂಡು ಇಬ್ಬರು ಸಮಾನರು ಆದ್ದರಿಂದ ಲಿಂಗ ಪತ್ತೆ ಮಾಡುವುದು ತುಂಬಾ ಅಪರಾಧ ಹಾಗೂ ಬಾಲ್ಯ ವಿವಾಹ ಮಾಡುವುದು ಕೂಡಾ ಅಪರಾಧ ಎಂದು ಹೇಳಿದರು. 

ಪ್ರಾಸ್ತಾವಿಕವಾಗಿ ಮಾತನಾಡಿದ ಇಂಡಿ ತಾಲೂಕು ಯೋಜನಾಧಿಕಾರಿ ನಟರಾಜ ಎಲ್ ಎಮ್  ಅವರು ಗ್ರಾಮೀಣ ಭಾಗದ ಮಹಿಳೆಯರಿಗೆ ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರ, ಕಾನೂನು ಅರಿವು, ಕೌಟುಂಬಿಕ ಸಾಮರಸ್ಯ ಕುರಿತು ಅರಿವು ಮೂಡಿಸುವ ಜತೆಗೆ, ಅಧ್ಯಯನ ಪ್ರವಾಸಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಹಲವು ಯೋಜನೆಗಳನ್ನು ರೂಪಿಸಿದ್ದು ಈ ಯೋಜನೆಯಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. 

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಇಂಡಿ ಘಟಕದ ಅಧ್ಯಕ್ಷೆ ಭಾಗ್ಯಜ್ಯೋತಿ ಭಗವಂತಗೌಡರ ಅವರು ಮಾತನಾಡಿ, ಆರೋಗ್ಯವಂಥ ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯ. ಕುಟುಂಬಕ್ಕಾಗಿ ದುಡಿಯುವ ಮಹಿಳೆಯರು, ಮಹಿಳೆಯರ ಪರವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ, ಮಹಿಳೆಯರು ಒಂದಲ್ಲ ಒಂದು ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳುವಂತಾಗಬೇಕು ಹಾಗೂ ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ತುಂಬಾ ಧನ್ಯವಾದಗಳು ಎಂದು ಹೇಳಿದರು. 

ವಿವಿಧ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳಿಗೆ ಸಹಾಯಧನ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರೇರೂಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮವ್ವ ಹೊಸಮನಿ ಹಾಗೂ ನ್ಯಾಯವಾದಿ ಜೆ ಬಿ ಬೇನೂರ ಮತ್ತು ಇಂಡಿ ತಾಲೂಕು ಮಹಿಳಾ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜಯಶ್ರೀ ಎಸ್ ಎಂ ಹಾಗೂ ಮೇಲ್ವಿಚಾರಕಿ ಅಶ್ವಿನಿ ಹಾಗೂ ಚನ್ನವೀರ ಮತ್ತು ಸೇವಾ ಪ್ರತಿನಿಧಿಗಳು ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು. ಮಹಿಳಾ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.