ಮಹಿಳೆಯರು ಸರ್ಕಾರದ ಯೋಜನೆ ಪಡೆದು ಉನ್ನತ ಸ್ಥಾನಕ್ಕೆ ಏರಬೇಕು
Women should take up government schemes and rise to higher positions
ಮಹಿಳೆಯರು ಸರ್ಕಾರದ ಯೋಜನೆ ಪಡೆದು ಉನ್ನತ ಸ್ಥಾನಕ್ಕೆ ಏರಬೇಕು
ಹಾವೇರಿ 07: ಪದವಿ ಪೂರ್ವ ಶಿಕ್ಷಣ ಬದುಕಿನಲ್ಲಿ ಅತ್ಯಂತ ಪ್ರಮುಖ ಹಂತವಾಗಿದ್ದು, ಭವಿಷ್ಯದ ಮಾರ್ಗವನ್ನು ಸ್ಪಷ್ಟವಾಗಿ ಕಂಡುಕೊಳ್ಳುವ ಅವಕಾಶ ವಿದೆ.ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳಿವೆ.ಯುವಕರು ಅವುಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು.ವಿದ್ಯಾರ್ಥಿನಿಯರು ಕಾಲಹರಣ ಮಾಡದೇ ಕಠಿಣ ಪರಿಶ್ರಮದಿಂದ ಅಧ್ಯಯನದಲ್ಲಿ ತೊಡಗಿ ಉನ್ನತ ಶ್ರೇಣಿ ಪಡೆದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹಾವೇರಿ ನಗರಸಭೆಯ ಮಾಜಿಅಧ್ಯಕ್ಷರು ಮತ್ತು ಹಾಲಿ ಸದಸ್ಯರಾದ ಸಂಜೀವಕುಮಾರ ನೀರಲಗಿ ಕರೆ ನೀಡಿದರು.
ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿಗೆ ಪ್ರಥಮ ಪಿ.ಯು.ಸಿ.ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಮತ್ತು ಸಾಂಸ್ಕೃತಿಕ, ಕ್ರೀಡೆ,ಎನ್‌ಎಸ್‌ಎಸ್ ಕಾಲೇಜು ಸಂಸತ್ತು ಸೇರಿದಂತೆ ವಿವಿಧ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದಾರೆ.ಉತ್ತಮ ರೀತಿಯ ಶಿಕ್ಷಣ ಪಡೆದು ಸರ್ಕಾರದ ವಿವಿಧ ಅವಕಾಶಗಳನ್ನು ಬಳಸಿಕೊಂಡು ಉನ್ನತ ಸ್ಥಾನಕ್ಕೆ ಏರಬೇಕು.ಇದರಿಂದ ಮಹಿಳಾ ಸಬಲೀಕರಣ ಮತ್ತು ಸಮಾನತೆಯನ್ನ ಸಾಧಿಸಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕರಾದ ಅಶೋಕ ಶಾಸ್ತ್ರಿ,ಬಸವರಾಜ ಮಾಳಗಿ,ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಶಿವಯೋಗಿ ಹಿರೇಮಠ,ಸುರೇಖಾ ಪಾಟೀಲ,ಶರಣು,ಮಾಳಣ್ಣನವರ,ಸಿಂಡಿಕೇಟ್ ಸದಸ್ಯ ರಮೇಶ ಲಮಾಣಿ,ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್.ಎಸ್.ನಿಸ್ಸಿಮಗೌಡರ, ಉಪನ್ಯಾಸಕ ಮಂಜುನಾಥ ಹತ್ತಿಯವರ, ರವಿ ಸಾದರ, ಈಶ್ವರಗೌಡ ಪಾಟೀಲ, ಕಾಲೇಜು ಸಂಸತ್ತಿನ ಪ್ರಧಾನ ಮಂತ್ರಿ ಕು.ಜ್ಯೋತಿ ಅರಸಲಿ ವೇದಿಕೆಯಲ್ಲಿದ್ದರೆ, ಎಲ್ಲಾ ಉಪನ್ಯಾಸಕ/ಕಿಯರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 