ಸಂಭ್ರಮದೊಂದಿಗೆ ಮಹಿಳೆಯರಿಂದ ಕುಂಭ ಮೆರವಣಿಗೆ
Women take part in Kumbh procession with enthusiasm
ಲಕ್ಷ್ಮೇಶ್ವರ 23: ಪಟ್ಟಣದ ಬಸ್ತಿಬಣದ ನೆಲಗಾರಪೇಟೆಯಲ್ಲಿ ಜೀರ್ಣೋದ್ಧಾರಗೊಂಡ ಸಾಲೇಶ್ವರ ದೇವಸ್ಥಾನ ಲೋಕಾರೆ್ಣ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿಸಂಭ್ರಮದೊಂದಿಗೆ ಮಹಿಳೆಯರಿಂದ ಕುಂಭ ಮೆರವಣಿಗೆ ನಡೆಯಿತು.
ಕುಂಭ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಕುಂಭ ಹೊತ್ತು ಸಾಗಿದ್ದರು. ಜೀರ್ಣೋದ್ಧಾರಗೊಂಡ ಸಾಲೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳ ಮುಖಾಂತರ ಸಾಗಿ ಸೋಮೇಶ್ವರ ದೇವಸ್ಥಾನ ತಲುಪಿ ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿ ಮರಳಿ ಸಾಲೇಶ್ವರ ದೇವಸ್ಥಾನ ತಲುಪಿತು. ಮೆರವಣಿಗೆಯಲ್ಲಿ ಪಲ್ಲಕ್ಕಿ ಈಶ್ವರ ಬಸವಣ್ಣ ಭಾವಚಿತ್ರದ ಮೆರವಣಿಗೆ ನಡೆಯಿತು. ಶ್ರೀ ಚನ್ನವೀರ ಮಹಾಸ್ವಾಮಿಗಳ ಹೂವಿನಶಿಗ್ಲಿ ವಿರಕ್ತಮಠ ಶ್ರೀ ಮಳೆ ಮಲ್ಲಿಕಾರ್ಜುನ ಸ್ವಾಮಿಗಳ ಕರೇವಾಡಿಮಠ ಪೂಜ್ಯರ ನೇತೃತ್ವದಲ್ಲಿ ಜೀರ್ಣೋದ್ಧಾರ ಗೊಂಡ ಸಾಲೇಶ್ವರ ದೇವಸ್ಥಾನದಲ್ಲಿ ಈಶ್ವರ ಬಸವಣ್ಣ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವಿಶೇಷ ಅಭಿಷೇಕ ಪೂಜೆಗಳೊಂದಿಗೆ ಲೋಕಾರೆ್ಣಗೊಳಲಿದ್ದು ನಂತರ ವೇದಿಕೆ ಕಾರ್ಯಕ್ರಮ ಜರಗುವುದು.
ಕುಂಭ ಮೆರವಣಿಗೆಯಲ್ಲಿ ಕಮಿಟಿಯ ಅಧ್ಯಕ್ಷರು ಸರ್ವ ಸದಸ್ಯರು ಮುಖಂಡರು ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 