ವರ್ಕ ಲೈಫ್ ಬ್ಯಾಲನ್ಸ್ ವರ್ಕಶಾಪ್ ಟು ವರ್ಕಿಂಗ್ ವುಮೆನ್ ಕುರಿತ ಕಾರ್ಯಗಾರ
Work-Life Balance Workshop for Working Women
ವಿಜಯಪುರ: ಮಹಿಳೆಯರು ತಮ್ಮ ವೈಯಕ್ತಿಕ ಮತ್ತು ವೃತ್ತಿ ಜೀವನದ ನಡುವೆ ಸಮತೋಲನ ಸಾಧಿಸುವುದು ಇಂದು ಅತ್ಯಂತ ಅವಶ್ಯಕ ಎಂದು ಸಿಕ್ಯಾಬ್ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಚ್.ಕೆ. ಯಡಹಳ್ಳಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಉನ್ನತ ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಹಾಗೂ ಸಿಂದಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇವರ ಸಹಯೋಗದಲ್ಲಿ, ಉದ್ಯೋಗಸ್ಥ ಮಹಿಳೆಯರಿಗಾಗಿ ಇತ್ತೀಚಿಗೆ ಹಮ್ಮಿಕೊಂಡಿದ್ದ ವರ್ಕ ಲೈಫ್ ಬ್ಯಾಲನ್ಸ್ ವರ್ಕಶಾಪ್ ಟು ವರ್ಕಿಂಗ್ ವುಮೆನ್ ಕುರಿತ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಜೀವನದ ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಲು ಸಮಯ ನಿರ್ವಹಣೆ, ನಮ್ಯತೆ, ಸಾವಧಾನತೆ, ಕೆಲಸದ ಆದ್ಯತೆ, ಕುಟುಂಬದ ಬೆಂಬಲ, ಹೊಂದಿಕೊಳ್ಳುವ ಕೆಲಸದ ಸಮಯ ಹಾಗೂ ಉದ್ಯೋಗದಾತರ ಸಹಕಾರದಂತಹ ತಂತ್ರಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಿದೆ. ಅಷ್ಟೇ ಅಲ್ಲದೇ ವೃತ್ತಿ ಮತ್ತು ವೈಯಕ್ತಿಕ ಜೀವನದ ಈ ಸಮತೋಲನವು ಮಹಿಳೆಯರ ಸಬಲೀಕರಣ ಹಾಗೂ ವ್ಯಕ್ತಿತ್ವ ವಿಕಾಸಕ್ಕೆ ಪ್ರಮುಖ ಅಸ್ತ್ರವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ.ಲಕ್ಷಿದೇವಿ ವೈ ಮಾತನಾಡಿ, ಮಹಿಳೆಯರು ವೃತ್ತಿ ಜೀವನದಲ್ಲಿ ಎದುರಿಸುವ ಲೈಂಗಿಕ ಕಿರುಕುಳದಂತಹ ಸಮಸ್ಯೆಗಳು ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು ಅವುಗಳನ್ನು ಜಾಣತನದಿಂದ ಎದುರಿಸುವ ಮನಸ್ಥಿತಿಯನ್ನು ಹೊಂದಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಿಂದಗಿಯ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜು ಪ್ರಾಂಶುಪಾಲ ಶಿವಲಿಂಗಪ್ಪ ಎಸ್ ಹಳೇಮನಿ ಮಾತನಾಡಿ, ಮಹಿಳೆಯರ ವೃತ್ತಿ ಬದುಕು ಮತ್ತು ವಯಕ್ತಿಕ ಜೀವನದ ಸಮತೋಲನ ಕಾಪಾಡುವಲ್ಲಿ ಕುಟುಂಬದ ಪಾತ್ರ ತುಂಬಾ ಮುಖ್ಯ. ಪುರುಷರು ಮಹಿಳೆಯರ ಜೊತೆಗೆ ಸಹಕಾರ ಮನೋಭಾವವನ್ನು ಹೊಂದಬೇಕು ಅದು ಮಹಿಳೆಯರ ಮಾನಸಿಕ ಮತ್ತು ದೈಹಿಕ ಕ್ಷಮತೆಯನ್ನು ಕಾಪಾಡುವಲ್ಲಿ ಹಾಗೂ ವೃತ್ತಿಪರ ಯಶಸ್ಸಿನ್ನು ಸಾಧಿಸಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿ.ಪಿ. ಕಲಾ, ವಾಣಿಜ್ಯ ಮತ್ತು ವ್ಹಿ. ವ್ಹಿ. ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಡಿ.ಎಂ. ಪಾಟೀಲ್, ಡಾ. ಮಿಂಚ್ ಹಾಗೂ ವಿವಿಧ ವೃತ್ತಿಯಲ್ಲಿ ತೊಡಗಿರುವ ಮಹಿಳೆಯರು ಕಾರ್ಯಾಗಾರದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಅಧ್ಯಯನ ಕೇಂದ್ರದ ಸಿಬ್ಬಂದಿ ಡಾ.ಶಶಿಕಲಾ ರಾಠೋಡ ನಿರೂಪಿಸಿದರು ಹಾಗೂ ಡಾ.ಭಾಗ್ಯಶ್ರೀ ದೊಡಮನಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 