ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸಿ
Work according to plan to avoid water problems for people and livestock
ವಿಜಯಪುರ, ಫೆ.12 : ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಕಾಲುವೆ ಜಾಲಗಳ ಮೂಲಕ ಹರಿಸಲಾಗುತ್ತಿರುವ ನೀರನ್ನು ತುಂಬಿಸಿಟ್ಟುಕೊಂಡು, ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ವಿವಿಧ ತಾಲೂಕಾ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ನಿರ್ವಹಣಾ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ನಡೆಸಿದ ಅವರು,
ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು. ಲಭ್ಯವಿರುವ ನೀರನ್ನು ಸದ್ಭಳಕೆ ಮಾಡಿಕೊಂಡು ಯಾವುದೇ ಸಮಸ್ಯೆಯಾಗದಂತೆ ನೀರನ್ನು ಕಾಯ್ದಿಟ್ಟುಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ಈಗಿನಿಂದಲೇ ಮುಂಜಾಗ್ರತೆ ವಹಿಸಿ, ಕುಡಿಯುವ ನೀರು ಸಮರ್ಕವಾಗಿ ಒದಗಿಸಲು ಯಾವುದೇ ಅಡೆ-ತಡೆ ಉಂಟಾಗದಂತೆ ನೋಡಿಕೊಳ್ಳಬೇಕು.
ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಬೋರ್‌ವೆಲ್‌ಗಳ ಮಾಹಿತಿ ಸಂಗ್ರಹಿಸಿಟ್ಟುಕೊಳ್ಳಬೇಕು. ಪ್ರತಿ ಎರಡು ವಾರಕ್ಕೊಮ್ಮೆ ಕಾರ್ಯಪಡೆ ಸಭೆ ನಡೆಸುವಂತೆ ಸೂಚನೆ ನೀಡಿದರು. ಕುಡಿಯವ ನೀರಿಗೆ ಸಮಸ್ಯೆಯಾಗಬಹುದಾದ ವಸತಿ ಪ್ರದೇಶಗಳನ್ನು ಗುರುತಿಸಿಟ್ಟುಕೊಳ್ಳಬೇಕು.ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಪೂರ್ವ ಸಿದ್ಧತೆ ಕೈಗೊಳ್ಳಬೇಕು. ಜಿಲ್ಲೆಯ ಗ್ರಾಮ, ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿರುವ ಒವರ್ ಹೆಡ್ ಟ್ಯಾಂಕ್ ಸ್ವಚ್ಛಗೊಳಿಸಬೇಕು.
ಸ್ವಚ್ಛಗೊಳಿಸಿದ ಕುರಿತು ಸಂಬಂಧಿಸಿದ ಗ್ರಾಮ ಪಂಚಾಯತನಲ್ಲಿ ಲಾಗ್ ಪುಸ್ತಕ ನಿರ್ವಹಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ನಿಗಾ ವಹಿಸಬೇಕು. ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಎಚ್ಚರಿಕೆ ವಹಿಸಬೇಕು.ಕುಡಿಯುವ ನೀರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಿದ ನಂತರ ಪೂರೈಸಿ, ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಿ, ಕುಡಿಯುವ ನೀರು ಪೂರೈಸುವ ಮುನ್ನ ನೀರಿನ ಜಲಮೂಲ, ನೀರು ಸಂಗ್ರಹಿಸುವ ಸ್ಥಳ, ನೀರಿನ ಮುಕ್ತಾಯದ ಹಂತದ ಸೇರಿದಂತೆ ಪರೀಕ್ಷಿಸಿದ ನಂತರವೇ ಸಂಬಂಧಿಸಿದ ಅಧಿಕಾರಿಗಳು ಖಚಿತಪಡಿಸಿಕೊಂಡು ನೀರು ಪೂರೈಕೆಗೆ ಕ್ರಮ ವಹಿಸಬೇಕು.
ಕುಡಿಯುವ ನೀರಿಗಾಗಿ ಕೆರೆ ತುಂಬಿಸಲಾಗುತ್ತಿದ್ದು, ಕೆರೆಯ ನೀರು ಸಂಗ್ರಹ ಸಾಮರ್ಥ್ಯ, ಲಭ್ಯವಿರುವ ಪ್ರಮಾಣ ಸೇರಿದಂತೆ ಕೆರೆಗೆ ನೀರು ಹರಿದು ಬರುವ ದೈನಂದಿನ ಪೂರ್ಣ ಪ್ರಮಾಣದ ಮಾಹಿತಿ ಹೊಂದಬೇಕು.ಸಮಸ್ಯೆ ಏನಾದರೂ ಉದ್ಭವಿಸಿದರೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕ ಸಾಧಿಸಿ, ಪರಿಹರಿಸಿಕೊಳ್ಳಬೇಕು.ಸ್ಥಳೀಯವಾಗಿ ನೀರು ಸಂಗ್ರಹದ ಮಾಹಿತಿ ಹೊಂದಿರಬೇಕು.
ಜಿಲಯ ಕುಡಿಯುವ ನೀರಿನ ಸಮಗ್ರ ಯೋಜನೆಯ ಜಲಧಾರೆ ಯೋಜನೆ-1 ಮತ್ತು ಯೋಜನೆ-2ರ ಕಾಮಗಾರಿ ಪ್ರಗತಿ ವಿವರ ಪಡೆದುಕೊಂಡ ಅವರು, ಯೋಜನೆ-1ರಲ್ಲಿನ ಬಾಕಿ ಕಾಮಗಾರಿಗಳಿಗೆ ವೇಗ ನೀಡಿ, ಜಮೀನಿ, ವಿದ್ಯುತ್ ಪೈಪಲೈನ್ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಪರಿಹರಿಸಿಕೊಂಡು, ಎಲ್ಲ ಅಡೆ ತಡೆಗಳನ್ನು ನಿವಾರಿಸಿಕೊಂಡು,ಶೀಘ್ರ ಜಲಧಾರೆ ಯೋಜನೆ-1ರ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ತಾಲೂಕು ಮಟ್ಟದಲ್ಲಿ ನಡೆಯುವ ಕುಡಿಯುವ ನೀರಿನ ಟಾಸ್ಕ ಪೋರ್ಸ ಸಭೆಯಲ್ಲಿ ಜಲಧಾರೆಗೆ ಸಂಬಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ತೆಗೆದುಕೊಳ್ಳಬೇಕು ಸೂಚಿಸಿದರು. ಸಭೆಯಲ್ಲಿ ಜಲಧಾರೆ ಯೋಜನೆ 1 ಹಾಗೂ 2ರ ಕಾಮಗಾರಿ ಕರಿತು ಸಂಪೂರ್ಣ ವಿವರವನ್ನು ಪಿಪಿಟಿ ಮೂಲಕ ವಿವರಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಡಾ.ಓದ್ರಾಮ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 