ಸಮಾಜದ ಕೆಲಸ ದೇವರ ಕೆಲಸ ಎಂಬಂತೆ ಸಮಾಜದ ಅಭಿವೃದ್ಧಿಗೆ ಶ್ರಮಿಸಿ : ಭೀಮ್ರಾಜ್ ಗಂಗಾವತಿ
Work for the development of society as if it were God's work: Bhimraj Gangavathi
ಲೋಕದರ್ಶನ ವರದಿ
ಕಂಪ್ಲಿ 04: ಸಮಾಜದ ಕೆಲಸ ದೇವರ ಕೆಲಸ ಎಂಬಂತೆ ವಾಸವಿ ಯುವಜನ ಸಂಘದ ನೂತನ ಪದಾಧಿಕಾರಿಗಳು ಸಮಾಜದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸುವ ಜೊತೆಗೆ ಇನ್ನಿತರ ಸಮಾಜ ಸೇವೆಗಳಿಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಯುವಜನ ಸಂಘದ ರಾಜ್ಯಾಧ್ಯಕ್ಷ ಭೀಮ್ರಾಜ್ ಗಂಗಾವತಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕಂಪ್ಲಿ ವಾಸವಿ ಯುವಜನ ಸಂಘದಿಂದ ಸಮೀಪದ ಆನೆಗುಂದಿಯ ಅಂಜನಾದ್ರಿ ಬಳಿಯ ಹನುಮನಹಳ್ಳಿಯ ಹಂಪಿ ಡೆಲ್ಮೌಂಟ್ ರೆಸಾರ್ಟ್ನಲ್ಲಿ ಆಯೋಜಿಸಿದ್ದ 2026-28ನೇ ಸಾಳಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸಮಾಜದ ಅಭಿವೃದ್ಧಿ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಒಳ್ಳೆಯ ಸಂಸ್ಕಾರ, ಶಿಸ್ತು, ಸಂಯಮ ಕಲಿಸುವುದು ಕೂಡ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ವಾಸವಿ ಯುವಜನ ಸಂಘದ ನೂತನ ಅಧ್ಯಕ್ಷ ಎನ್.ತಿರುಮಲೇಶ ಅಧಿಕಾರ ಸ್ವೀಕರಿಸಿ ಮಾತನಾಡಿ, ಯುವಜನ ಸಂಘವೂ ನಮ್ಮನ್ನು ಗುರುತಿಸಿ, ಕಂಪ್ಲಿ ಅಧ್ಯಕ್ಷರನ್ನಾಗಿ ಮಾಡಿರುವುದು ಖುಷಿಯಾಗಿದ್ದು, ಈ ಜವಾಬ್ದಾರಿಗೆ ತಕ್ಕಂತೆ ಕೆಲಸ ಮಾಡಲಾಗುವುದು. ಆರ್ಯವೈಶ್ಯ ಮತ್ತು ವಾಸವಿ ಯುವಜನ ಸಂಘದ ಪದಾಧಿಕಾರಿಗಳ ಸಹಕಾರದೊಂದಿಗೆ ಮತ್ತು ಸ್ಥಳೀಯ ಮುಖಂಡರ ಮಾರ್ಗದರ್ಶನದಲ್ಲಿ ಸಮಾಜದ ಏಳಿಗೆಗೆ ಮತ್ತು ಇನ್ನಿತರ ಸಮಾಜ ಸೇವೆಗೆ ನಿರಂತರವಾಗಿ ಶ್ರಮಿಸಲಾಗುವುದು ಎಂದರು. ವಾಸವಿ ಯುವಜನ ಸಂಘದ ನಿಕಟಪೂರ್ವ ಅಧ್ಯಕ್ಷ ಡಿ.ಮಂಜೇಶ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ನಂತರ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಬದಲ್ಲಿ ಆರ್ಯವೈಶ್ಯ ಯುವಜನ ಮಹಾಸಭಾದ ರಾಜ್ಯ ಸಹ ಕಾರ್ಯದರ್ಶಿ ಕೆ.ಜಗದೀಶ, ಆರ್ಯವೈಶ್ಯ ಸಂಘದ ಧರ್ಮಕರ್ತ ವೈ.ಚಂದ್ರಮೋಹನ ಶ್ರೇಷ್ಠಿ, ಕಂಪ್ಲಿ ಆರ್ಯವೈಶ್ಯ ಸಂಘದ ಅಧ್ಯಕ್ಷ ಡಿ.ವಿ.ಸುಬ್ಬರಾವ್, ವಾಸವಿ ಕಲ್ಯಾಣ ಮಂಟಪ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಬಿ.ಕೋಟೇಶ್ವರ್, ವಾಸವಿ ಮಹಿಳಾ ಮಂಡಳಿ ಅಧ್ಯಕ್ಷೆ ಟಿ.ರಮಾದೇವಿ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಜಿ.ರಾಜಾರಾವು ಸೇರಿದಂತೆ ಅನೇಕರಿದ್ದರು.
ಪದಗ್ರಹಣ: ಇಲ್ಲಿನ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಎನ್.ತಿರುಮಲೇಶ, ಉಪಾಧ್ಯಕ್ಷರಾಗಿ ಎಂ.ಸಂದೀಪ್, ಸಿ.ಸುನೀಲ್ ಕುಮಾರ, ಮಾಧ್ಯಮ ಸಲಹೆಗಾರರಾಗಿ ಕೆ.ಜಗದೀಶ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಸರ್ವಾನುಮತದಿಂದ ಆಯ್ಕೆಗೊಂಡು ಪದಗ್ರಹಣ ಮಾಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 