ಬಾಲಕಾರ್ಮಿಕ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು ಶ್ರಮವಹಿಸಿ: ನ್ಯಾ.ಅರ್ಜುನ್

ಬಳ್ಳಾರಿ,ಜೂ.12: ಬಾಲ ಕಾರ್ಮಿಕ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು ಕೇಂದ್ರ ಮತ್ತು ರಾಜ್ಯ ಸರ್ಕಾರ , ಸರ್ಕಾರ ರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಅರ್ಜುನ್ ಎಸ್. ಮಲ್ಲೂರ್ ಅವರು ಹೇಳಿದರು.

ಜಿಲ್ಲಾಡಳಿತ, ಜಿ.ಪಂ, ಕಾನೂನು ಸೇವೆಗಳ ಪ್ರಾಧಿಕಾರ, ಕಾಮರ್ಿಕ ಇಲಾಖೆ ಮತ್ತು ರಾಷ್ಟ್ರೀಯ ಬಾಲ ಕಾರ್ಮಿಕ  ಯೋಜನೆ ಇವರ ಸಹಯೋಗದೊಂದಿಗೆ ವಿಶ್ವ ಬಾಲಕಾಮರ್ಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಾಲ್ಯ ಹಾಗೂ ಕಿಶೋರ ಕಾರ್ಮಿಕ  ಪದ್ಧತಿ ನಿಮರ್ೂಲನೆ ಕುರಿತು ಆಟೋ ಮೂಲಕ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. 

ಮಕ್ಕಳು ರಾಷ್ಟ್ರದ ಸಂಪತ್ತು, ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾಮರ್ಿಕ ಪದ್ದತಿಯು ದೈಹಿಕ, ನೈತಿಕ, ಮಾನಸಿಕ ಹಾಗೂ ಆಥರ್ಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶವನ್ನು ತಡೆಗಟ್ಟುತ್ತದೆ. ಕಲಿಯುವ ವಯಸ್ಸಿನಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿದು ದುಡಿಮೆಯಲ್ಲಿ ತೊಡಗಿಕೊಳ್ಳುವುದು ಅತ್ಯಂತ ಕಳವಳಕಾರಿಯಾಗಿದೆ.  ಈ ನಿಟ್ಟಿನಲ್ಲಿ ಬಾಲಕಾಮರ್ಿಕ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಎಲ್ಲರೂ ಶ್ರಮಪಡಬೇಕು ಎಂದು ಹೇಳಿದ ಅವರು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಲಾಗಿದೆ. 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಮಕ್ಕಳನ್ನು ನಿಯೋಜಿಸಿಕೊಂಡಲ್ಲಿ ಮೊದಲ ಅಪರಾಧಕ್ಕೆ ಮಾಲಿಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 20 ಸಾವಿರದಿಂದ 50 ಸಾವಿರದವರೆಗೆ ದಂಡ ಕೆಲವೊಮ್ಮೆ ಎರಡನ್ನು ವಿಧಿಸಲು ಅವಕಾಶವಿರುತ್ತದೆ. ಪುನರಾವತರ್ಿತ ಅಪರಾಧಕ್ಕೆ 1ವರ್ಷದಿಂದ 5ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಹಾಗೂ ತಪ್ಪಿತಸ್ಥ ಮಾಲಿಕರು ತಾವು ನಿಯೋಜಿಸಿಕೊಂಡ ಪ್ರತಿ ಮಗುವಿಗೆ 20 ಸಾವಿರಗಳ ಪರಿಹಾರವನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕಾಗುತ್ತದೆ ಎಂದರು. 

 ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎ.ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮೀ ಮೈದೂರ್, ಕಾಮರ್ಿಕ ಅಧಿಕಾರಿಗಳಾದ ಚಂದ್ರಶೇಖರ ಐಲಿ, ಕಮಲ್ ಅಲ್ತಾಫ್ ಅಹಮದ್,  ರಾಷ್ಟ್ರೀಯ ಬಾಲಕಾಮರ್ಿಕ ಯೋಜನಾ ನಿದರ್ೆಶಕ ಎ.ಮೌನೇಶ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಮಂಜುನಾಥ್, ಪಿ.ಎಂ.ಈಶ್ವರಯ್ಯ, ಅವರು ಸೇರಿದಂತೆ ಇತರರು ಇದ್ದರು.