ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸಮನ್ವಯದಿಂದ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ
Work in coordination to control infectious diseases: Deputy Commissioner
ಲೋಕದರ್ಶನ ವರದಿ
ಗದಗ, ಸೆ. 4: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆ. 2ರಂದು ಜಿಲ್ಲಾ ರೋಗವಾಹಕ ನಿಯಂತ್ರಣ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ನೀರಿನಿಂದ ಹರಡುವ ರೋಗಗಳು, ಲಸಿಕೆ ಮೂಲಕ ತಡೆಗಟ್ಟಬಹುದಾದ ರೋಗಗಳು, ಪ್ರಾಣಿಜನ್ಯ ರೋಗಗಳು, ಹಾವು ಕಡಿತ ಹಾಗೂ ರೇಬಿಸ್ ಮರಣ ಪ್ರಕರಣಗಳ ಕುರಿತು ಪರೀಶೀಲನೆ ನಡೆಸಲಾಯಿತು.
ಜಿಲ್ಲೆಯಲ್ಲಿ ಜನವರಿಯಿಂದ ಜುಲೈ 2026ರವರೆಗೆ 2,140 ಕಾಲರಾ ಪ್ರಕರಣಗಳು, 33 ಡೆಂಗ್ಯೂ, 8 ಚಿಕನ್ಗುನ್ಯಾ, 5 ಮಲೇರಿಯಾ, 10 ಆನೆಕಾಲು ರೋಗ, 10 ಇನ್ಫ್ಲುಯೆಂಜಾ ಪ್ರಕರಣಗಳು ವರದಿಯಾಗಿವೆ. ಅಲ್ಲದೆ, 5,805 ನಾಯಿ ಕಡಿತ, 1,319 ಇತರೆ ಪ್ರಾಣಿ ಕಡಿತ ಹಾಗೂ 213 ಹಾವು ಕಡಿತ ಪ್ರಕರಣಗಳು ದಾಖಲಾಗಿವೆ. ಎರಡು ಶಂಕಿತ ರೇಬಿಸ್ ಮರಣ ಹಾಗೂ ಮೂರು ಹಾವು ಕಡಿತದಿಂದಾದ ಮರಣ ಪ್ರಕರಣಗಳು ವರದಿಯಾಗಿವೆ.
ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಓಷಧಗಳು, ಹಾವು ಕಡಿತ ಪ್ರಕರಣಗಳಿಗೆ ಬೇಕಾದ ಆ್ಯಂಟಿ ಸ್ನೇಕ್ ವೆನಮ್, ಪ್ರಾಣಿ ಕಡಿತ ಪ್ರಕರಣಗಳಿಗೆ ಅಗತ್ಯವಿರುವ ಆ್ಯಂಟಿ ರೇಬಿಸ್ ಲಸಿಕೆ ಹಾಗೂ ರೇಬಿಸ್ ಇಮ್ಯುನೋಗ್ಲೋಬ್ಯುಲಿನ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ನೀರು ಶುದ್ಧೀಕರಣ, ಸ್ವಚ್ಛತೆ, ಸೊಳ್ಳೆ ನಿಯಂತ್ರಣ, ಹಾವು ಹಾಗೂ ಪ್ರಾಣಿ ಕಡಿತದ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಬಲಪಡಿಸಬೇಕು. ಸಾರ್ವಜನಿಕರು ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿ ಸಹಕರಿಸಬೇಕು ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 