ಹಾವೇರಿ06 : ಇದೇ ಫೆ. 11 ರಿಂದ 13ರವರೆಗೆ ಹಾವೇರಿ ನಗರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಜಾನಪದ ಜಾತ್ರೆ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಹಾವೇರಿ ಉಪವಿಭಾಗಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರು ಸೂಚಿಸಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಾನಪದ ಜಾತ್ರೆ ಸಿದ್ಧತೆ ಕುರಿತಂತೆ ವಿವಿಧ ಇಲಾಖೆಗಳ ಸಮನ್ವಯ ಸಮಿತಿಯ ಸಭೆ ನಡೆಸಿದ ಅವರು ಮೂರು ದಿನಗಳ ಕಾರ್ಯಕ್ರಮದಲ್ಲಿ ರಾಜ್ಯ ನಾನಾಭಾಗದಿಂದ 300ಕ್ಕೂ ಹೆಚ್ಚು ಕಲಾವಿದರು ಆಗಮಿಸಲಿದ್ದಾರೆ.
ಈ ಎಲ್ಲ ಕಲಾವಿದರಿಗೆ ವಸತಿ ವ್ಯವಸ್ಥೆ, ಆತಿಥ್ಯ ಹಾಗೂ ಊಟೋಪಚಾರದ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮವಹಿಸುವಂತೆ ಸಲಹೆ ನೀಡಿದರು.
ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಫೆಬ್ರುವರಿ 11 ರಿಂದ 13ರವರೆಗೆ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೂ ಆದ್ಯತೆ ನೀಡಲಾಗುತ್ತದೆ. ಈ ಕಲಾವಿದರ ಆಯ್ಕೆ ಹಾಗೂ ಅಂತಿಮವಾಗಿ ಫೆಬ್ರುವರಿ 13 ರಂದು ನಡೆಯಲಿರುವ ಪ್ರದರ್ಶನದಲ್ಲಿ ಅವಕಾಶಕಲ್ಪಿಸುವುದು ಹಾಗೂ ನಾಡಿನ ನಾನಾ ಜಾನಪದ ಕಲೆಗಳ ಪ್ರದರ್ಶನಕ್ಕಾಗಿ ರಾಜ್ಯ ಬೇರೆ ಬೇರೆಭಾಗಗಳಿಂದ ಆಗಮಿಸಲಿರುವ ಕಲಾವಿದರ ಪ್ರದರ್ಶನಗಳು ಮುಖ್ಯ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆ, ಕಾರ್ಯಕ್ರಮ ನಿರೂಪಣೆ, ವೇದಿಕೆ ನಿಮರ್ಾಣ, ದೀಪಾಲಂಕಾರ, ಧ್ವನಿವರ್ಧಕ, ವಿದ್ಯುತ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮವಹಿಸುವಂತೆ ಸೂಚಿಸಿದರು.
ಫೆಬ್ರುವರಿ 13 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಹುಕ್ಕೇರಿಮಠದ ಆವರಣದಿಂದ ಜಾನಪದಜಾತ್ರೆಯ ಕಲಾಯಾತ್ರೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸ್ಥಳೀಯ ವಿದ್ಯಾಥರ್ಿ ಜಾನಪದ ಕಲಾತಂಡಗಳ ಕಲಾವಿದರು, ಜಿಲ್ಲೆಯ ವಿವಿಧ ಕಲಾವಿದರು, ರಾಜ್ಯ ಮಟ್ಟದ ಕಲಾವಿದರು ಹಾಗೂ ಅಲಂಕೃತ ಎತ್ತಿನ ಬಂಡಿಗಳು ಮೆರವಣಿಗೆಯಲ್ಲಿ ಭಾಗವಹಿಸಬೇಕಾಗಿದೆ. ಈ ಕುರಿತಂತೆ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳು ಸೂಕ್ತ ವ್ಯವಸ್ಥೆ ಕೈಗೊಳ್ಳಲು ಸಲಹೆ ನೀಡಿದರು.
ದೇವರಾಜ ಅರಸು ಭವನ, ಸಕರ್ಾರಿ ನೌಕರರ ಭವನ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ವಸತಿ ನಿಲಯ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸೇರಿದಂತೆ ವಿವಿಧೆಡೆ ಕಲಾವಿದರಿಗೆ ವಸತಿ ವ್ಯವಸ್ಥೆ ಮಾಡಬೇಕು. ವಾಸ್ತವ್ಯ ಸ್ಥಳದಿಂದ ವೇದಿಕೆಗೆ ಆಗಮಿಸಲು ವಾಹನ ವ್ಯವಸ್ಥೆ, ವಾಸ್ತವ್ಯದ ಸ್ಥಳದಲ್ಲಿ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಅಗತ್ಯ ಕ್ರಮವಹಿಸುವಂತೆ ಸೂಚನೆ ನೀಡಿದರು.
ಜಾನಪದ ಜಾತ್ರೆ ಕಾರ್ಯಕ್ರಮ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಮಾಹಿತಿಯನ್ನು ಜನರಿಗೆ ಪರಿಚಯಪಡಿಸಲು ಮಹಿಳಾ ಸ್ವ ಸಹಾಯ ಸಂಘಗಳು, ಕೃಷಿ, ತೋಟಗಾರಿಕೆ,ಅರಣ್ಯ ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆಯಬೇಕು. ಸ್ತ್ರೀ ಶಕ್ತಿ ಸಂಘಗಳು ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾಥರ್ಿಗಳಿಗೆ ರಂಗೋಲೆ ಸ್ಪಧರ್ೆ ಆಯೋಜಿಸಿ ಜಾನಪದ ಜಾತ್ರೆಯ ನಡೆಯುವ ದಾರಿಯುದ್ದಕ್ಕೂ ವರ್ಣರಂಜಿತವಾಗಿ ಅಲಂಕರಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕರಾದ ಶಶಿಕಲಾ ಹುಡೇದ, ತಹಶೀಲ್ದಾರ ಜಿ.ಎಸ್.ಶಂಕರ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೆಶಕಿ ಚೈತ್ರಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ವಾತರ್ಾಧಿಕಾರಿ ಡಾ.ಬಿ.ಆರ್.ರಂಗನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಪೌರಾಯುಕ್ತ ಜಿದ್ದಿ, ತಾಲೂಕು ಪಂಚಾಯತಿ ಕಾರ್ಯನಿವರ್ಾಹಕ ಅಧಿಕಾರಿ ಬಸವರಾಜ, ಸಕರ್ಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಅಮೃತ ಪಾಟೀಲ, ಡಯಟ್ ಉಪನ್ಯಾಸಕ ಚಿನ್ನಿಕಟ್ಟಿ, ನಿಮರ್ಿತಿ ಕೇಂದ್ರ ಯೋಜನಾಧಿಕಾರಿ ತಿಮ್ಮೇಶ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.