ಕೃಷಿ ಹೊಂಡ ನಿರ್ಮಾಣಕ್ಕೆ ಫಲಾನುಭವಿಗೆ ಕಾರ್ಯಾದೇಶ ವಿತರಣೆ

    ಕೃಷಿ ಹೊಂಡ ನಿರ್ಮಾಣಕ್ಕೆ ಫಲಾನುಭವಿಗೆ ಕಾರ್ಯಾದೇಶ ವಿತರಣೆ Work order issued to beneficiary for the construction of a farm pond

ಲೋಕದರ್ಶನ ವರದಿ 

ಹುಬ್ಬಳ್ಳಿ 1: ಇಂದು ಸುಳ್ಳ ಗ್ರಾಮ ಪಂಚಾಯಿತಿಗೆ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಸದಾನಂದ ಅಮರಾಪುರ ಅವರು ಭೇಟಿ ನೀಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರೀಶೀಲನೆ ನಡೆಸಿದರು.  ಈ ಸಂದರ್ಭದಲ್ಲಿ ಚನ್ನಬಸಪ್ಪ ನವಲಿ ಅವರು ಕೃಷಿ ಹೊಂಡ ನಿರ್ಮಾಣಕ್ಕಾಗಿ ಆಯ್ಕೆಯಾಗಿದ್ದು, ಅವರಿಗೆ ವಿಬಿಜಿರಾಮಜಿ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಸಹಾಯಕ ನಿರ್ದೇಶಕರಾದ ಸದಾನಂದ ಅಮರಾಪುರ ಅವರು ಕಾರ್ಯಾದೇಶ ವಿತರಿಸಿದರು. 

ಕೃಷಿ ಹೊಂಡ ನಿರ್ಮಾಣದಿಂದ ಮಳೆ ನೀರಿನ ಸಂಗ್ರಹಣೆ, ಅಂತರ್ಜಲ ಮಟ್ಟದ ಸುಧಾರಣೆ ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ಲಭ್ಯತೆ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.  ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ, ನಿಗದಿತ ಅವಧಿಯಲ್ಲಿ ಹಾಗೂ ಸರ್ಕಾರದ ಮಾರ್ಗಸೂಚಿಗಳಂತೆ ಅನುಷ್ಠಾನಗೊಳಿಸುವಂತೆ ಅವರು ಸೂಚಿಸಿದರು.