ಬಾಲ್ಯವಿವಾಹ ನಿಷೇಧಕ್ಕೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ಶೇಖರಗೌಡ ಜಿ ರಾಮತ್ನಾಳ
Work sincerely to ban child marriage: Shekhar Gowda G Ramatnal
ಕೊಪ್ಪಳ 12: ಬಾಲ್ಯವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಇದರ ನಿಷೇಧಕ್ಕೆ ಮತ್ತು ಯಲಬುರ್ಗಾವನ್ನು “ಬಾಲ್ಯವಿವಾಹ ಮುಕ್ತ ತಾಲೂಕನ್ನಾಗಿಸಲು” ತಾಲೂಕಿನ ಎಲ್ಲಾ ಬಾಲ್ಯವಿವಾಹ ನಿಷೇದಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಹೇಳಿದರು.
ಅವರು ಮಂಗಳವಾರ ಯಲಬುರ್ಗಾದ ಕಂದಾಯ ಭವನದಲ್ಲಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಲಬುರ್ಗಾ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಮಕ್ಕಳ ರಕ್ಷಣಾ ವ್ಯವಸ್ಥೆಗಳ ಕುರಿತು ಭಾಗೀದಾರ ಇಲಾಖಾ ಅಧಿಕಾರಿಗಳೊಂದಿಗೆ ಜಾಗೃತಿ, ಸಮಾಲೋಚನೆ ಮತ್ತು ಪ್ರಗತಿ ಪರೀಶೀಲನಾ ಸಭೆ”ಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸರ್ವೋಚ್ಚ ನ್ಯಾಯಾಲಯದ ರಿಟ್ ಸಂ:1234/2017ರಲ್ಲಿ ಬಾಲ್ಯವಿವಾಹ ತಡೆಗಟ್ಟುವಲ್ಲಿ ನಿರ್ಲಕ್ಷ್ಯತೆಯನ್ನು ತೋರುವ “ಬಾಲ್ಯವಿವಾಹ ನಿಷೇದಾಧಿಕಾರಿಗಳ” ವಿರುದ್ಧ ಭಾರತೀಯ ನ್ಯಾಯ ಸಂಹಿತಿ 199(ಸಿ)ರನ್ವಯ ಪ್ರಕರಣವನ್ನು ದಾಖಲಿಸುವಂತೆ ಮಾನ್ಯ ಸರ್ವೋಚ್ಛ ನ್ಯಾಯಾಲಯವು ನಿರ್ದೇಶಿಸಿದೆ. ಆದ್ದರಿಂದ ಯಾವುದೇ ಬಾಲ್ಯವಿವಾಹ ಪ್ರಕರಣಗಳು ಇದ್ದಲ್ಲಿ ಅಥವಾ ಕಂಡುಬಂದಲ್ಲಿ ಬಾಲ್ಯವಿವಾಹ ನಿಷೇದಾಧಿಕಾರಿಗಳು ಸಂವೇದನಾಶೀಲರಾಗಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ತಪ್ಪಿದಲ್ಲಿ ಆಯೋಗವು ಅಂತಹ ಘಟನೆಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಅಂತವರ ವಿರುದ್ಧ ಆಯೋಗದಿಂದ ನಿರ್ದಾಕ್ಷೀಣ್ಯವಾಗಿ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದರು.
ಸಾಮೂಹಿಕ ವಿವಾಹ ಕಾರ್ಯಕ್ರಮಗಳ ಆಯೋಜಕರು ಕಡ್ಡಾಯವಾಗಿ ತಹಶೀಲ್ದಾರರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಅನುಮತಿಯನ್ನು ಪಡೆದುಕೊಂಡ ನಂತರವೇ ಸಾಮೂಹಿಕ ವಿವಾಹಗಳನ್ನು ಆಯೋಜಿಸಬೇಕು. ತಪ್ಪಿದಲ್ಲಿ ಅಥವಾ ಬಾಲ್ಯವಿವಾಹ ಜರುಗಿದ್ದು ಕಂಡುಬಂದಲ್ಲಿ, ಸಾಮೂಹಿಕ ವಿವಾಹ ಆಯೋಜಕರುಗಳು ಸೇರಿದಂತೆ ಸಂಬಂಧಿಸಿದ ಎಲ್ಲರ ವಿರುದ್ಧ ಪರೀಶೀಲಿಸಿ ಪ್ರಕರಣವನ್ನು ದಾಖಲಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂ-ಮೂಟೋ ಅಧಿಕಾರದಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಳ್ಳಬೇಕು. ವಿವಾಹ ಆಯೋಜನೆ ಮಾಡುವತಂಹ ಸ್ಥಳಗಳಲ್ಲಿ “ಬಾಲ್ಯವಿವಾಹ ನಿಷೇಧಿಸಲಾಗಿದೆ, ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ” ಎಂದು ಶಾಶ್ವತ ಗೋಡೆ ಬರಹವನ್ನು ಎಲ್ಲರಿಗೂ ಗೋಚರಿಸುವಂತೆ ಬರೆಯಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಕ್ಕಳ ಸ್ನೇಹಿ ವಾತಾವರಣ ಮತ್ತು ಮಕ್ಕಳ ಪರವಾದ ಗ್ರಾಮ ಪಂಚಾಯತ್‌ಗಳನ್ನಾಗಿಸಲು ಪ್ರತಿ ಗ್ರಾಮ ಪಂಚಾಯತ್‌ಗಳಲ್ಲಿ ಕನಿಷ್ಠ 3 ತಿಂಗಳಿಗೊಮ್ಮೆ “ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ”ಗಳ ಸಭೆಯನ್ನು ಕಡ್ಡಾಯವಾಗಿ ಆಯೋಜಿಸಿ ವರದಿಯನ್ನು ತಾಲೂಕು ಪಂಚಾಯತ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕರಾರಿಗಳಿಗೆ ಸಲ್ಲಿಸುವಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸುವಂತೆ ಕಾರ್ಯನಿವಾಹಕ ಅಧಿಕಾರಿಗಳು, ತಾಲೂಕು ಪಂಚಾಯತ್ ಯಲಬುರ್ಗಾರವರಿಗೆ ತಿಳಿಸಿದರು.
ಮಕ್ಕಳ ಸುರಕ್ಷತೆಗಾಗಿ ಸರಕಾರವು ಮಕ್ಕಳ ರಕ್ಷಣಾ ನೀತಿ-2016 ಪರಿಷ್ಕರಣೆ-2023ನ್ನು ಜಾರಿಗೆ ತಂದಿದ್ದು, ಅದರನ್ವಯ ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಕಡ್ಡಾಯವಾಗಿ “ಮಕ್ಕಳ ಸುರಕ್ಷತಾ ಸಮಿತಿ” “ಪೋಷಕರ ಸಮಿತಿ” ಗಳನ್ನು ರಚಿಸಿ ನಿಯಮಿತವಾಗಿ ಸಭೆಗಳನ್ನು ಆಯೋಜಿಸಬೇಕು. “ಮಕ್ಕಳ ಸಹಾಯವಾಣಿ-1098/ 112”ರ ಬಗ್ಗೆ ಶಾಶ್ವತ ಗೋಡೆ ಬರಹಗಳನ್ನು ಬರೆಯಿಸಿರಬೇಕು, “ಮಕ್ಕಳ ಸಲಹಾ ಪೆಟ್ಟಿಗೆ”ಯನ್ನು ಸ್ಥಾಪಿಸಿ ನಿಯಮಿತವಾಗಿ ಪರೀಶೀಲಿಸಬೇಕು. ಅನುದಾನಿತ ಮತ್ತು ಅನುದಾನರಹಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳ ಪೊಲೀಸ್ ಪರೀಶೀಲನೆ ಕಡ್ಡಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ಹಿತದೃಷ್ಠಿಯಿಂದ ಸುರಕ್ಷತಾ ನೀತಿಯನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಖಚಿತಪಡಿಸಿಕೊಂಡು 1 ತಿಂಗಳೊಳಗಾಗಿ ವರದಿಯನ್ನು ಆಯೋಗಕ್ಕೆ ನೀಡುವಂತೆ ಶಾಲಾ ಶಿಕ್ಷಣ ಇಲಾಖಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಂವಿಧಾನವು 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಮತ್ತು ಉಚಿತ ಶಿಕ್ಷಣದ ಹಕ್ಕನ್ನು ನೀಡಿದೆ. ಮಕ್ಕಳು ಕುರಿ ಕಾಯುವುದು, ಬೀಜೊತ್ಪಾದನೆಯಲ್ಲಿ ಕೆಲಸ ಮಾಡುತ್ತಿರುವುದು ಕಂಡುಬರುತ್ತಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಅನೀರೀಕ್ಷಿತವಾಗಿ ದಾಳಿಗಳನ್ನು ಆಯೋಜಿಸಿ, ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿ ತರುವಂತೆ ಕ್ರಮ ವಹಿಸಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನವನ್ನು ಚಲಾಯಿಸಲು ನೀಡುವುದು ಮೋಟಾರು ವಾಹನ ಕಾಯ್ದೆಯನ್ವಯ ಅಪರಾಧವಾಗಿದ್ದು, 18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ನೀಡಬೇಡಿ ಎಂದು ಸಮುದಾಯದಲ್ಲಿ ಜಾಗೃತಿಯನ್ನು ಮೂಡಿಸಬೇಕು ಮತ್ತು ಒಂದು ವೇಳೆ ಈ ರೀತಿಯಲ್ಲಿ ಘಟನೆಗಳು ಕಂಡುಬಂದಲ್ಲಿ ಕಾನೂನು ರೀತ್ಯ ಕ್ರಮ ಜರುಗಿಸುವಂತೆ, ತೆರೆದ ಮನೆ ಕಾರ್ಯಕ್ರಮಗಳನ್ನು ಪ್ರತಿ ಠಾಣೆಯಲ್ಲೂ ನಡೆಸಬೇಕು. ಬೀಟ್ ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ನಡೆಯುವ “ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ”ಗಳಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಇತ್ತೀಚೆಗೆ ಜಿಲ್ಲೆಯ ತಾಲೂಕು ಒಂದರಲ್ಲಿ ದೈಹಿಕವಾಗಿ ಅಸ್ವಸ್ಥವಾಗಿದ್ದ ಮಗುವಿಗೆ ಗುಣಮುಖವಾಗಲೆಂದು ಮೂಡನಂಬಿಕೆಯಿಂದ ಅಥವಾ ಮೂಡ ಸಂಪ್ರದಾಯದಿಂದ ಬರೆಯನ್ನು ಹಾಕಿದ್ದು, ಅದರಿಂದಾಗಿ ಮಗು ಮೃತಪಟ್ಟಿದ್ದರಿಂದಾಗಿ ಪ್ರಕರಣವು ಕನಕಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುತ್ತದೆ. ಈ ರೀತಿಯ ಪ್ರಕರಣಗಳು ಜಿಲ್ಲೆಯಲ್ಲಿ ಪುನರಾವರ್ತನೆಯಾಗದಂತೆ “ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ”ಗಳಲ್ಲಿ ಮತ್ತು ಸಮುದಾಯಗಳಲ್ಲಿ ಜಾಗೃತಿಯನ್ನು ಮೂಡಿಸುವಂತೆ ಹಾಗೂ ಈ ರೀತಿಯ ಪ್ರಕರಣಗಳು ಕಂಡುಬಂದಲ್ಲಿ ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಪೊಲೀಸ್ ಅಧಿಕಾರಿಗಳಿಗೆ ಎಮ್.ಎಲ್.ಸಿ.ಯನ್ನು ನೀಡಲು ಕ್ರಮವಹಿಸಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ಬಾಲ ಗರ್ಭಿಣಿಯರಾದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರ ಕಲಂ 19ರಡಿಯಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ ಮಾಹಿತಿಯನ್ನು ನೀಡುವುದು ಕಡ್ಡಾಯವಾಗಿದ್ದು, ಈ ಕುರಿತು ಕ್ರಮವಹಿಸಬೇಕು. ಸರಕಾರಿ ಶಾಲೆಗಳಿಗೆ ಪ್ರಥಮ ಚಿಕಿತ್ಸೆ ಸಾಮಗ್ರಿ ಮತ್ತು ಪೆಟ್ಟಿಗೆಗಳನ್ನು ವಿತರಿಸಿ ಎಂದು ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಶಾಲಾ ಅವಧಿಗೆ ಅನುಗುಣವಾಗಿ ಮಕ್ಕಳು ಶಾಲೆಗೆ ತೆರಳಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವಂತೆ ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಮಕ್ಕಳ ಹಕ್ಕುಗಳ ಕುರಿತು ಸಂವೇದನಾಶೀಲರನ್ನಾಗಿಸಲು “ಮಕ್ಕಳ ಹಕ್ಕುಗಳು ಮತ್ತು ಸುರಕ್ಷಿತ ಮತ್ತು ಅಸುರಕ್ಷಿತ ಸ್ಪರ್ಶದ ಕುರಿತು ಜಾಗೃತಿಯನ್ನು ಮೂಡಿಸುವಂತೆ” ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
18 ವರ್ಷದೊಳಗಿನ ಮಕ್ಕಳಿಗೆ ಮತ್ತು ಭರಿಸುವ ಮಾದಕ ವಸ್ತುಗಳನ್ನು ನೀಡುವುದು, ಮಕ್ಕಳಿಂದ ಸಾಗಿಸುವುದು ಸಹ ಅಪರಾಧವಾಗಿದ್ದು, ಮಕ್ಕಳಿಗೆ ಮದ್ಯ ಮಾದಕ ವಸ್ತುಗಳನ್ನು ಮಾರದಂತೆ ಮತ್ತು 18 ವರ್ಷದೊಳಗಿನ ಮಕ್ಕಳನ್ನು ಕಾನೂನು ಬಾಹಿರ ಕೃತ್ಯಗಳಿಗೆ ಅಥವಾ ಶಿಕ್ಷಣ ವಂಚಿತರನ್ನಾಗಿಸಿ ಬಾರ್, ಹೊಟೇಲ್ ಅಥವಾ ರೆಸ್ಟೋರೆಂಟ್‌ಗಳ ಕೆಲಸಕ್ಕೆ ನೇಮಿಸಿಕೊಳ್ಳದಂತೆ ವೆಂಡರ್ಸಗಳಿಗೆ ಸೂಚಿಸುವಂತೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಈ ಸಭೆಯಲ್ಲಿ ಯಲಬುರ್ಗಾ ಗ್ರೇಡ-2 ತಹಶೀಲ್ದಾರ ಬಸವರಾಜ ಹೊರಪೇಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತ ಸ್ವಾಮಿ ಪೂಜಾರ, ಯಲಬುರ್ಗಾ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದಾರ್ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 