ಎಸ್ಎಸ್ಎಲ್ಸಿ ಪರೀಕ್ಷೆಗಳಲ್ಲಿ ಅಕ್ರಮಕ್ಕೆ ಅವಕಾಶ ನೀಡದಂತೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ: ಸುನೀಲ್ಕುಮಾರ್

ಕೊಪ್ಪಳ 18: ಮಾರ್ಚ್  27ರಿಂದ ಏಪ್ರಿಲ್ 09 ರವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಕ್ಕೆ ಅವಕಾಶ ನೀಡದಂತೆ ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳ ಸಿದ್ಧತೆ ಕುರಿತ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿದರ್ೇಶನದಂತೆ ಕಾರ್ಯ ನಿರ್ವಹಿಸಬೇಕು. ಉಪ ವಿಭಾಗಾಧಿಕಾರಿಗಳನ್ನು ಪರೀಕ್ಷಾ ವೀಕ್ಷಕರನ್ನಾಗಿ ನೇಮಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಮೊಬೈಲ್ ಬಳಸುವುದನ್ನು ಹಾಗೂ ವಿದ್ಯಾಥರ್ಿಗಳು ಕ್ಯಾಲ್ಕುಲೇಟರ್ ಹಾಗೂ ಮೊಬೈಲ್ಗಳನ್ನು ತರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ಬಾರಿ ಮೊಬೈಲ್ ಸ್ವಾಧೀನಾಧಿಕಾರಿ ಎಂದು ಹೊಸ ಹುದ್ದೆಯನ್ನು ಸೃಷ್ಟಿಸಲಾಗಿದ್ದು, ಮೊಬೈಲ್ ತರುವ ಸಿಬ್ಬಂದಿ ಮೊಬೈಲ್ ಸ್ವಾಧೀನಾಧಿಕಾರಿಗೆ ನೀಡಿ ಪರೀಕ್ಷೆ ಮುಗಿದ ನಂತರ ಮರಳಿ ಪಡೆಯಬಹುದು. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ನ್ನು ಜಾರಿಗೊಳಿಸಲಾಗುವುದು. ಪರೀಕ್ಷಾ ಕೇಂದ್ರದ ಸುತ್ತಲಿನ ಝರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಹಾಗೂ ಪರೀಕ್ಷಾ ಕೆಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲು ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ವಹಿಸಬೇಕು. ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸುವಾಗ ಅವರು ತಮ್ಮ ಕ್ಲಸ್ಟರ್ ಹೊರತುಪಡಿಸಿ ಬೇರೆ ಕ್ಲಸ್ಟರ್ಗೆ ನಿಯೋಜಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಚ್ಚರವಹಿಸಬೇಕು. ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್-19 ವೈರಸ್ ಕುರಿತು ಅತ್ಯಂತ ಎಚ್ಚರಿಕೆ ವಹಿಸಬೇಕು. ಯಾವುದೇ ವಿದ್ಯಾಥರ್ಿಗೆ ಕೆಮ್ಮ, ಶೀತ ಸೇರಿದಂತೆ ವೈರಸ್ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸ್ಥಳೀಯ ವೈದ್ಯಾಧಿಕಾರಿಗಳ ದೃಢೀಕರಣದೊಂದಿಗೆ ಸಂಬಂಧಿಸಿದ ವಿದ್ಯಾಥರ್ಿಯನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಬೇಕು. ಇದು ಸಂಪೂರ್ಣವಾಗಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರ ಜವಾಬ್ದಾರಿಯಾಗಿದೆ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ಪರೀಕ್ಷಾ ಸಮಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವುದು ಕಂಡು ಬಂದಲ್ಲಿ ಕನರ್ಾಟಕ ಶಿಕ್ಷಣ ಕಾಯ್ದೆ ಕಂಡಿಕೆ 115ರ ದಂಡ ಸಂಹಿತೆ ಪರೀಕ್ಷಾ ನಿಯಮ ಉಲ್ಲಂಘನೆ ಸೆಕ್ಷನ್ 24 ಎ ಪ್ರಕಾರ ತಪ್ಪಸ್ಥರಿಗೆ 3 ರಿಂದ 5 ವರ್ಷಗಳವರೆಗೆ ಜೈಲುವಾಸ ಹಾಗೂ 5 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಅವರು ಹೇಳಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂತರ್ಿ ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಉತ್ತಮ ಫಲಿತಾಂಶ ಸಾಧಿಸಲು ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ಈ ಬಾರಿ ಜಿಲ್ಲೆಯು ಉತ್ತಮ ಫಲಿತಾಂಶ ಸಾಧಿಸುವ ನಿರೀಕ್ಷೆ ಇದೆ. ಆದ್ದರಿಂಧ ಪರೀಕ್ಷಾ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಅವರು ಹೇಳಿದರು.

ಪರೀಕ್ಷಾ ಕೇಂದ್ರ ಹಾಗೂ ವಿದ್ಯಾರ್ಥಿಗಳು ವಿವರ: ಜಿಲ್ಲೆಯಲ್ಲಿ ಒಟ್ಟು 63 ಪರೀಕ್ಷಾ ಕೇಂದ್ರಗಳು ಇದ್ದು, ರೆಗ್ಯುಲರ್ ವಿದ್ಯಾಥರ್ಿಗಳು 19458, ಪುನರಾವರ್ತಿತ ವಿದ್ಯಾರ್ಥಿಗಳು 1513 ಮತ್ತು ಬಾಹ್ಯ ವಿದ್ಯಾಥರ್ಿಗಳು 774 ಸೇರಿದಂತೆ ಒಟ್ಟು 21698 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ 03 ಕೇಂದ್ರಗಳನ್ನು ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಲಾಗಿದೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ, ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.