ನವದೆಹಲಿ, ಮೇ 8, ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಗೂಡ್ಸ್ ರೈಲು ಹರಿದು 17 ಕಾರ್ಮಿಕರು ಸಾವನ್ನಪ್ಪಿರುವ ಘಟನೆಯ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ .ಕಾರ್ಮಿಕರು ಸಹೋದರರು ಗೂಡ್ಸ್ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಸುದ್ದಿ ಕೇಳಿ ನಿಜಕ್ಕೂ ಆಘಾತವಾಗಿದೆಎಂದು ಅವರು ಟ್ವೀಟ್ ಮಾಡಿದ್ದಾರೆ . ರಾಷ್ಟ್ರನಿರ್ಮಾಣಕಾರರಾಗಿರುವ ವಲಸೆ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರನ್ನು ದೇಶದಾದ್ಯಂತ ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಸಾಂತ್ವಾನ ಹೇಳಿರುವ ಅವರು, ದುರಂತದಲ್ಲಿ ಗಾಯಗೊಂಡವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿ ಎಂದೂ ರಾಹುಲ್ ಟ್ವೀಟ್ ಮೂಲಕ ಹಾರೈಸಿದ್ದಾರೆ.