ಸುರಕ್ಷತಾ ಕಿಟ್ ಧರಿಸಿ ಕಾರ್ಮಿಕರು ಕೆಲಸ ನಿರ್ವಹಿಸಬೇಕು: ಸರ್ವೋತ್ತಮ ಜಾರಕಿಹೊಳಿ
Workers must perform their duties while wearing safety kits: Sarvottama Jarkiholi
ಮೂಡಲಗಿ, 28: ಕಾರ್ಮಿಕ ಇಲಾಖೆ ವತಿಯಿಂದ ವಿತರಿಸಲಾಗುವ ಸುರಕ್ಷತಾ ಕಿಟ್ಗಳನ್ನು ಕಡ್ಡಾಯವಾಗಿ ಧರಿಸಿಕೊಂಡು ಕಾರ್ಮಿಕರು ಕೆಲಸ ನಿರ್ವಹಿಸಬೇಕು. ಕೆಲಸದಷ್ಟೇ ತಮ್ಮ ಆರೋಗ್ಯ ಹಾಗೂ ಸುರಕ್ಷತೆಯೂ ಮುಖ್ಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಪಟ್ಟಣದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಮಿಕರು ಸುರಕ್ಷತಾ ನಿಯಮಗಳನ್ನು ಪಾಲಿಸಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಸಮರ್ಥ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಸಂಘದ ಕಾರ್ಯದರ್ಶಿ ಸುಭಾಷ್ ಗೊಂದ್ಯಾಗೋಳ ಮಾತನಾಡಿ, ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾರ್ಮಿಕ ವೃತ್ತಿಗಳಲ್ಲಿ ತೊಡಗಿರುವವರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡು ಪ್ರತಿವರ್ಷ ನವೀಕರಣ ಮಾಡಿಸಿಕೊಳ್ಳಬೇಕು. ಕಾರ್ಮಿಕ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಪಡೆಯಲು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕೆಲಸ ನಿರ್ವಹಿಸುವಾಗ ಕಡ್ಡಾಯವಾಗಿ ಸುರಕ್ಷತಾ ಕಿಟ್ ಧರಿಸಿ, ತಮ್ಮ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಕಾರ್ಮಿಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಮರೆಪ್ಪ ಮರೆಪ್ಪಗೋಳ, ಶಿವಾನಂದ ಚಂಡಕಿ, ಈಶ್ವರ ಕಂಕಣವಾಡಿ, ರಮೇಶ ಸಣ್ಣಕ್ಕಿ, ಶಾಬಪ್ಪ ಸಣ್ಣಕ್ಕಿ, ಅಶೋಕ ಸಿದ್ದಿಂಗಪ್ಪಗೋಳ, ಸುರೇಶ ಸಣ್ಣಕ್ಕಿ, ಕಾರ್ಮಿಕ ಇಲಾಖೆಯ ಸಿಬ್ಬಂದಿ ರಿಯಾನ್ ಜಕಾತಿ, ಸುಭಾಷ್ ಮಾಲೋಜಿ, ಮುರಗೆಪ್ಪ ತಳವಾರ ಸೇರಿದಂತೆ ಕಾರ್ಮಿಕರು ಉಪಸ್ಥಿತರಿದ್ದರು.
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ 