ಕಾರ್ಮಿಕರು ಸರ್ಕಾರದ ಕಲ್ಯಾಣ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಶಾಸಕ ದುರ್ಯೋಧನ ಐಹೊಳೆ
Workers should make good use of the government's welfare schemes: MLA Duryodhana Aihole
ಚಿಕ್ಕೋಡಿ 04 : ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು. ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಾಗರಮುನ್ನೋಳ್ಳಿ ಹೋಬಳಿ ವ್ಯಾಪ್ತಿಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಮಿಕ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು. ಕಾರ್ಮಿಕರು ಸರ್ಕಾರದ ನಿಯಮಾನುಸಾರ ನೋಂದಣಿ ಮಾಡಿಕೊಂಡು ಕಾರ್ಮಿಕ ಕಲ್ಯಾಣ ಮಂಡಳಿಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು.
ಪಿಂಚಣಿ, ಕುಟುಂಬ ಪಿಂಚಣಿ, ಟೂಲ್ ಕಿಟ್, ಹೆರಿಗೆ ಸಹಾಯಧನ, ಶೈಕ್ಷಣಿಕ ನೆರವು, ವೈದ್ಯಕೀಯ ಸಹಾಯ, ಅಪಘಾತ ಪರಿಹಾರ, ಮದುವೆ ಸಹಾಯಧನ ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಅರ್ಹರು ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು. ಯುವ ಮುಖಂಡರಾದ ಲಕ್ಷ್ಮಣ ಪೂಜೇರಿ ಹಾಗೂ ರಮೇಶ ಕಾಳನ್ನವರ ಮಾತನಾಡಿ, ಕಾರ್ಮಿಕರು ಹಾಗೂ ರೈತರ ಹಿತಕ್ಕಾಗಿ ಶಾಸಕ ದುರ್ಯೋಧನ ಐಹೊಳೆ ಅವರು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಹೇಳಿದರು. ಕಾರ್ಮಿಕ ಕಲ್ಯಾಣ ಅಧಿಕಾರಿ ಸೋಮಪ್ಪ ನೆನಸಗಿ ಅವರು ಇಲಾಖೆಯ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸುರೇಶ್ ಬೆಲ್ಲದ, ಸಿದ್ದು ಖಿಂಡಿ, ರಾಜು ಹರಗನ್ನವರ, ಹಸನ್ ಸನದಿ, ರಾಮಗೌಡ ಪಾಟೀಲ ಸೇರಿದಂತೆ ಹಲವು ಗಣ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 