ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಘೋಷಣೆ
Working Journalists Association election announcement
ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಘೋಷಣೆ
ಗದಗ 10: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕಾನಿಪ) 2025-28 ನೆ ಅವಧಿಯ ಆಡಳಿತ ಮಂಡಳಿ ಆಯ್ಕೆ ಚುನಾವಣೆ ಘೋಷಣೆಯಾಗಿದೆ. ಸಂಘದ ರಾಜ್ಯ ಘಟಕವೂ ಸೇರಿದಂತೆ ಗದಗ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ. ಅ. 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟವಾಗಲಿದೆ. ಅ. 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರೀಶೀಲನೆ, ಅ. 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ. ನ. 9 ಭಾನುವಾರ ಗದಗ ಪತ್ರಿಕಾ ಭವನದಲ್ಲಿ ಬೆಳಗ್ಗೆ 9 ರಿಂದ ಮದ್ಯಾಹ್ನ 3ಗಂಟೆ ವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾ ಅಧಿಕಾರಿ ಶಿವಾನಂದ ಹಿರೇಮಠ ಪ್ರಕಟಣೆ ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 