ಉದ್ಯೋಗಸ್ಥ ಮಹಿಳೆ ಯೋಗ, ಧ್ಯಾನ, ಸಂಗೀತದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ಡಾ.ಸಂತೋಷ
Working women should engage in activities like yoga, meditation, and music: Dr. Santosha
ವಿಜಯಪುರ 31: ವೃತ್ತಿ ನಿರತ ಮಹಿಳೆ ಒತ್ತಡದ ಬದುಕು ಮತ್ತು ಖಿನ್ನತೆಯಿಂದ ಹೊರಬರಬೇಕಾದರೆ, ಯೋಗ, ಧ್ಯಾನ, ವ್ಯಾಯಾಮ ಮತ್ತು ಸಂಗೀತದಂತಹ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ವೈದ್ಯಕೀಯ ಮಹಾವಿದ್ಯಾಲಯ ಮನೋಚಿಕಿತ್ಸೆ ಅಧ್ಯಯನ ವಿಭಾಗ ಮತ್ತು ಆಸ್ಪತ್ರೆಯ ವೈದ್ಯ ಡಾ.ಸಂತೋಷ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಕೆಲಸ ಮಾಡುವ ಮಹಿಳೆಯರಿಗಾಗಿ ಕೆಲಸ-ಜೀವನ ಸಮತೋಲನ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂತಹ ಚಟುವಟಿಕೆಗಳು ಮನಸ್ಸಿಗೆ ಶಾಂತಿ, ದೇಹಕ್ಕೆ ಶಕ್ತಿ ಹಾಗೂ ಬದುಕಿಗೆ ಹೊಸ ಉತ್ಸಾಹವನ್ನು ನೀಡುತ್ತವೆ ಎಂದರು.
ಧಾರವಾಡ ಮನೋ ಚಿಕಿತ್ಸಕಿ ಶ್ರೀದೇವಿ ಬಿರಾದಾರ ಮಾತನಾಡಿ, ಉದ್ಯೋಗಸ್ಥ ಮಹಿಳೆ ತಮ್ಮ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬೇಕೆಂದರೆ, ತಮಗೋಸ್ಕರ ಸಮಯವನ್ನು ತೆಗೆದುಕೊಳ್ಳಬೇಕು. ಪೋಷಕಾಂಶಯುಕ್ತ ಆಹಾರ ಸೇವನೆ ಹಾಗೂ ಧ್ಯಾನಕ್ಕಾಗಿ ಸಮಯವನ್ನು ಮೀಸಲಿಡಬೇಕು ಎಂದು ಹೇಳಿದರು. ಶ್ರೀಧರ ದೇಸಾಯಿ ಮಾತನಾಡಿ, ಉದ್ಯೋಗಸ್ಥ ಮಹಿಳೆಯರು ಜೀವನದ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ವಿವಿಧ ಕಲಾ ಮತ್ತು ಚಟುವಟಿಕೆಗಳನ್ನು ಕರಗತ ಮಾಡಿಕೊಳ್ಳಬೇಕು ಎಂದರು.
ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಪ್ರೊ.ವೆಂಕೋಬಾ ನಾರಾಯಣಪ್ಪ ಮತ್ತು ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಪ್ರೊ.ರಾಜಕುಮಾರ ಮಾಲಿಪಾಟೀಲ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಡಾ. ರೂಪಾ ನಾಯಕೋಡಿ ನಿರೂಪಿಸಿದರು ಮತ್ತು ಸಂಶೋಧನಾ ವಿದ್ಯಾರ್ಥಿನಿ ಸರಸ್ವತಿ ಬೆಳ್ಳುಂಡಗಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 