ಸೆ.10 ರಂದು ಗ್ಯಾರಂಟಿ ಯೋಜನೆಗಳ ಕುರಿತು ಕಾರ್ಯಾಗಾರ ಮತ್ತು ಪ್ರಗತಿ ಪರೀಶೀಲನೆ ಸಭೆ
Workshop and progress review meeting on guarantee schemes on September 10
ಸೆ.10 ರಂದು ಗ್ಯಾರಂಟಿ ಯೋಜನೆಗಳ ಕುರಿತು ಕಾರ್ಯಾಗಾರ ಮತ್ತು ಪ್ರಗತಿ ಪರೀಶೀಲನೆ ಸಭೆ
ಹಾವೇರಿ 04: ಜಿಲ್ಲೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಪರೀಶೀಲನೆ ಜಿಲ್ಲಾಮಟ್ಟದ ಸಭೆಯನ್ನು ಸೆಪ್ಟೆಂಬರ್ 10 ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರುಚಿ ಬಿಂದಲ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಪರೀಶೀಲನೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಮಟ್ಟದ ಕಾರ್ಯಾಗಾರವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳೊಂದಿಗೆ ಇತರೆ ಇಲಾಖೆಗಳು ಸೇರಿ ಸಮನ್ವಯದೊಂದಿಗೆ ಕೆಲಸ ನಿರ್ವಹಿಸಬೇಕು. ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಂದ ಯಶೋಗಾಥೆ ಹಂಚಿಕೊಳ್ಳಲು ಫಲಾನುಭವಿಗಳನ್ನು ಪ್ರತಿ ಯೋಜನೆಗೆ- ಇಬ್ಬರಂತೆ ಆಯ್ಕೆ ಮಾಡಿ ಅವರನ್ನು ಕಾರ್ಯಾಗಾರಕ್ಕೆ ಕರೆದುಕೊಂಡು ಬರಲು ಆಯಾ ಇಲಾಖೆಯ ಮುಖ್ಯಸ್ಥರಿಗೆ ಜವಾಬ್ದಾರಿ ನೀಡಿದರು.
ಹಾಗೆಯೇ ಕಾರ್ಯಾಗಾರ ನಡೆಸಲು ತೀರ್ಮಾನಿಸಲಾಗಿರುವ ಸಭಾಂಗಣದ ಸಿದ್ಧತೆ ಮತ್ತು ಸಕಲ ವ್ಯವಸ್ಥೆ ಮಾಡಿಕೊಳ್ಳಬೇಕು. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತು ಕಲಾ ತಂಡಗಳ ಮೂಲಕ ನಾಟಕ ಪ್ರದರ್ಶನ ಹಾಗೂ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಹಾಗೂ ಶಾಲಾ ಮಕ್ಕಳಿಂದ ನೃತ್ಯ ಸಂಯೋಜನೆ ಏರಿ್ಡಸಿ ಕಾರ್ಯಕ್ರಮದ ಮೆರಗು ಹೆಚ್ಚಿಸುವುದು, ಕಾರ್ಯಾಗಾರಕ್ಕೆ ಆಗಮಿಸುವ ಗ್ಯಾರಂಟಿ ಯೋಜನೆ ಫಲಾನುಭವಿಗಳು ಹಾಗೂ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು ಯಾವುದೇ ಲೋಪಗಳಾಗದಂತೆ ಎಚ್ಚರಿಕೆಯಿಂದ ಸಕಲ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಎಲ್ಲ ಅಧಿಕಾರಿಗಳಿಗೆ ಅಗತ್ಯ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪುನೀತ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 