ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಕಾರ್ಯಗಾರ
Workshop at Akkamahadevi Women's University
ವಿಜಯಪುರ 26: ವಿದ್ಯಾರ್ಥಿಗಳು ಪದವಿ ಪಡೆಯುವಲ್ಲಿ ನಮ್ಯತೆ ಲಭಿಸುವುದರೊಂದಿಗೆ, ವಿವಿಧ ವಿಶ್ವವಿದ್ಯಾಲಯಗಳು ನೀಡುವ ಪಠ್ಯಕ್ರಮಗಳ ಕ್ರೆಡಿಟ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಸಾಧ್ಯತೆ ದೊರೆಯುತ್ತದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಪರೀಕ್ಷಾ ವಿಭಾಗದ ಜಂಟಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಕನ ಇದರ ಪ್ರಯೋಜನವನ್ನು ವಿದ್ಯಾರ್ಥಿನಿಯರು ಪಡೆಯಬೇಕು ಎಂದರು. ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕುಲಸಚಿವ ಶಂಕರಗೌಡ ಸೋಮನಾಳ ಕಾರ್ಯಗಾರದ ಲಾಭಗಳನ್ನು ವಿದ್ಯಾರ್ಥಿನಿಯರು ಪಡೆದುಕೊಳ್ಳವಂತೆ ಕರೆನೀಡಿ, ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕಾರ್ಯಾಗಾರದಲ್ಲಿ ಹಿರಿಯ ನೋಡಲ್ ಅಧಿಕಾರಿ ಪ್ರೊ. ಜಿ.ಬಿ. ಸೋನಾರ, ಗಣಕ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಜಿ.ಜಿ. ರಜಪುತ, ತುಮಕುರು ವಿಶ್ವವಿದ್ಯಾಲಯದ ಗ್ರಾಂಥಾಲಯ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರೂಪೇಶ ಕುಮಾರ ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಎಸ್‌ಬಿ ಕಲಾ ಹಾಗೂ ಕೆಸಿಪಿ ವಿಜ್ಞಾನ ಕಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಅನೀಲ ಕುಮಾರ ಪಾಟೀಲ, ಹಾಗೂ 400ಕ್ಕೂ ಹೆಚ್ಚು ಸ್ನಾತಕ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಇಐಕ್ಯೂಎಸಿ ನಿರ್ದೇಶಕ ಪ್ರೊ. ಪಿ.ಜಿ.ತಡಸದ ಪ್ರಾಸ್ತಾವಿಕವಾಗಿ ನುಡಿಗಳನ್ನಾಡಿ ಸ್ವಾಗತಿಸಿದರು. ಐಕ್ಯೂಎಸಿ ಉಪ ನಿರ್ದೇಶಕಿ ಡಾ. ಶ್ವೇತಾ ಬೆಂಗಾರೆ ಕಾರ್ಯಕ್ರಮವನ್ನು ನಿರೂಪಿಸಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಪರೀಕ್ಷಾ ವಿಭಾಗದ ಜಂಟಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರವನ್ನು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಉದ್ಘಾಟಿಸಿದರು. ಚಿತ್ರದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಇಐಕ್ಯೂಎಸಿ ನಿರ್ದೇಶಕ ಪ್ರೊ. ಪಿ.ಜಿ.ತಡಸದ, ಉಪ ನಿರ್ದೇಶಕಿ ಡಾ. ಶ್ವೇತಾ ಬೆಂಗಾರ, ಹಿರಿಯ ನೋಡಲ್ ಅಧಿಕಾರಿ ಪ್ರೊ. ಜಿ.ಬಿ. ಸೋನಾರ, ಗಣಕ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಜಿ.ಜಿ. ರಜಪುತ ಹಾಗೂ ಮತ್ತಿತರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 