ಆರ್ಟಿಫಿಸಿಯಲ್ ಇಂಟೆಲಿಜೆನ್ಸ್ ಮತ್ತು ಅಪ್ಲಿಕೇಶನ್ಸ್ ಎಂಬ ಕಾರ್ಯಾಗಾರ
Workshop on Artificial Intelligence and Applications
ಲೋಕದರ್ಶನ ವರದಿ
ದಾರವಾಢ 23 : ವಿದ್ಯಾರ್ಥಿಗಳ ಕಲಿಕೆಯಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೇನ್ಸ್) ಮಹತ್ವದ ಬದಲಾವಣೆಗಳನ್ನು ತರುತ್ತಿದೆ. ಆಸಕ್ತಿದಾಯಕ ಕಲಿಕೆಗೆ ವಿದ್ಯಾರ್ಥಿಗಳನ್ನು ಆಕರ್ಷಿಸುವುದಲ್ಲದೇ ಕಲಿಕೆಯನ್ನು ಪರಿಣಾಮಕಾರಿಯಾಗಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಉಪಪ್ರಾಚಾರ್ಯ ಡಾ. ಸೂರಜ್ ಜೈನ್ ಹೇಳಿದರು. ಜೆ.ಎಸ್.ಎಸ್. ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯು ಬಿ.ಸಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಆರ್ಟಿಫಿಸಿಯಲ್ ಇಂಟೆಲಿಜೆನ್ಸ್ ಮತ್ತು ಅಪ್ಲಿಕೇಶನ್ಸ್ ಎಂಬ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರ್ಟಿಫಿಶಿಯಲ್ ಇಂಟೆಲಿಜೇನ್ಸ್ ಇಂದು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುತ್ತಿದೆ. ಐಟಿ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಆಕರ್ಷಿತವಾಗಿ ಬೆಳೆಯುತ್ತಿದೆ. ಮಾಹಿತಿಯು ಗಿಥಬ್‌ನಲ್ಲಿ ನಿರಂತರವಾಗಿ ಅಪ್ಡೇಟ್ ಆಗುತ್ತಿರುತ್ತದೆ.ಜೊತೆಗೆ ಆರ್ಟಿಫಿಶಿಯಲ್ ಇಂಟೆಲಿಜೇನ್ಸ್ ಸಂಬಂಧಿತ ಉದ್ಯೋಗಾವಕಾಶಗಳು ಇಂದು ಹೆಚ್ಚಾಗಿ ಇರುವುದರಿಂದ ವಿದ್ಯಾರ್ಥಿಗಳು ಇದನ್ನು ಅಧ್ಯಯನ ಮಾಡಿದರೆ ಸುಲಭವಾಗಿ ಉದ್ಯೋಗ ಪಡೆಯಬಹುದಾಗಿದೆ.
ಇದು ವಿದ್ಯಾರ್ಥಿಗಳನ್ನು ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಸಿದ್ಧರಾಗಲು ಸಹಾಯ ಮಾಡುತ್ತದೆ. ಹೀಗಾಗಿ ಇದರ ಮಹತ್ವ ಅರಿತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೇನ್ಸ್ ಕುರಿತ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು ಸಂಪನ್ಮೂಲ ವ್ಯಕ್ತಿಗಳು ಅಭಿಷೇಕ ಹುಕ್ಕೇರಿಕರ ಅವರು ನಡೆಸಿಕೊಡಲಿದ್ದಾರೆ. ವಿದ್ಯಾರ್ಥಿಗಳು ಇಂತಹ ತರಬೇತಿ, ಕಾರ್ಯಾಗಾರ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯ ಮತ್ತು ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ ಎಂಬ ಸದಾಶಯದೊಂದಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಅಜಿತ ಪ್ರಸಾದ ಅವರು ಇಂತಹ ವಿಶೇಷ ಕಾರ್ಯಾಗಾರ ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸಕ್ಕೆ ಪ್ರೋತ್ಸಾಹಿಸುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.
ಅಭಿಷೇಕ ಹುಕ್ಕೇರಿಕರ ಅವರು ಕೃತಕ ಬುದ್ಧಿಮತ್ತೆಯ ಪ್ರಯೋಜನಗಳು, ಬ್ರೈನ್‌ಸ್ಟಾಮಿಂರ್ಗ್ ಮತ್ತು ಅಬಾಕಸ್ ಆರ್ಟಿಫಿಶಿಯಲ್ ಇಂಟೆಲಿಜೇನ್ಸ್ ಅಪ್ಲಿಕೇಶನ್ಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಕು. ಚಿನ್ಮಯಿ ಜಾಗೀರದಾರ ಪ್ರಾರ್ಥಿಸಿದರು. ಕು. ರಂಜಿತಾ ಸ್ವಾಗತಿಸಿದರು. ಕು. ಅನುಷಾ ಅತಿಥಿಗಳನ್ನು ಪರಿಚಯಿಸಿದರು. ಕು. ಅನಿಷಾ ಕೆ. ಅತಿಥಿಗಳಿಗೆ ಪುಷ್ಾರೆ್ಪಣ ಮಾಡಿ ಸ್ವಾಗತಿಸಿದರು. ಕು. ಪ್ರೇರಣಾ ವಂದಿಸಿದರು. ವಿವೇಕ ಲಕ್ಷ್ಮೇಶ್ವರ, ಉಮೇಶ ಅಂಬಿಗೇರ, ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 