ಮಹಿಳೆಯರಿಗೆ ಸಾಮಾಜಿಕ ಭದ್ರತೆ ಕುರಿತು ಕಾರ್ಯಾಗಾರ


ಲೋಕದರ್ಶನ ವರದಿ

ವಿಜಯಪುರ 27:  ಮಹಿಳೆಯರು ಇಂದಿನ ಆಧುನಿಕ ಯುಗದಲ್ಲಿ ಎಲ್ಲಾ ರಂಗಗಳಲ್ಲಿಯೂ ಸಮರ್ಪಕವಾಗಿ ದುಡಿಯುತ್ತಿದ್ದಾರೆ. ಅವರಿಗೆ ಸಕರ್ಾರದ ಮತ್ತು ಸಮಾಜದ ಹಕ್ಕು ಬಾಧ್ಯತೆಗಳು ಸಮರ್ಪಕವಾಗಿ ಪಾಲನೆಯಾಗಬೇಕು ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ವಿಷ್ಣು ಶಿಂಧೆ ಹೇಳಿದರು. 

ಅವರು ವಿಜಯಪುರ ನಗರದ ಹೊರ ವಲಯದಲ್ಲಿರುವ ಹಿಟ್ನಳ್ಳಿ ಆಯ್.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ ಮತ್ತು ಆಹೇರಿ ಬಸವೇಶ್ವರ ಕರ್ಮವೀರ ಕಲಾ, ಸಾಹಿತ್ಯ, ಸಂಸ್ಕೃತಿ ವೇದಿಕೆಯ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಕೌಶಲ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ತರಬೇತಿ ಪಡೆಯುತ್ತಿರುವ ಮಹಿಳೆಯರಿಗೆ ಮಹಿಳಾ ಸಬಲೀಕರಣ ಮತ್ತು ಸಾಮಾಜಿಕ ಭದ್ರತೆ ಕುರಿತು ಏರ್ಪಡಿಸಿದ್ದ ಕಾಯರ್ಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. 

ಮಹಿಳೆಯರಿಗಾಗಿ ಸಕರ್ಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಮಹಿಳೆಯರು ಸಕರ್ಾರದ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ. ಅವರಿಗೆ ಸಕರ್ಾರದ ಯೋಜನೆಗಳ ಸೌಲಭ್ಯಗಳನ್ನು ಸಮರ್ಪಕವಾಗಿ ಮುಟ್ಟುವಂತೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಂಡರೆ ಮಾತ್ರ ಯೋಜನೆಗಳಿಗೆ ಮಹತ್ವ ಬರಲು ಸಾಧ್ಯ. ಇಂದು ಮಹಿಳೆಯರು ಸಮಾಜದಲ್ಲಿ ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಆಥರ್ಿಕವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉನ್ನತ ಸಾಧನೆ ಮಾಡುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಸಾಮಾಜಿ ಸಮಾನತೆ ಮತ್ತು ಸುರಕ್ಷತೆಯನ್ನು ನೀಡುವುದು ಸಕರ್ಾರದ ಜವಾಬ್ದಾರಿಯಾಗಿದೆ ಎಂದರು. 

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಸದಸ್ಯರಾದ ಸುಜಾತಾ ಎಸ್. ಕಳ್ಳಿಮನಿ ಮಾತನಾಡಿ, ಮಹಿಳೆಯರು ಇಂದು ಎಲ್ಲಾ ರಂಗಗಳಿಲ್ಲಿಯೂ ಮುನ್ನಡೆಯುತ್ತಿದ್ದಾರೆ. ಆದರೆ ಕೃಷಿಯಲ್ಲಿಯೂ ಕೂಡ ಅಲ್ಪಮಟ್ಟದಲ್ಲಿ ಮಾತ್ರ ಮಹಿಳೆಯರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮಹಿಳೆಯರು ಕೃಷಿಯೊಂದಿಗೆ ಉಪಕಸಬುಗಳಾದ ಹೈನುಗಾರಿಕೆ, ಕೋಳಿ ಸಾಕಾಣಿಕೆ ಮುಂತಾದ ಕಸಬುಗಳನ್ನು ಅಳವಡಿಸಿಕೊಂಡು ತಮ್ಮ ಆಥರ್ಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು. ಮಹಿಳೆ ಕೇವಲ ಅಡುಗೆ ಮನೆಗೆ ಸೀಮಿತವಾಗದೆ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಅಂದಾಗ ಮಾತ್ರ ಮಹಿಳೆಯರು ಆಥರ್ಿಕವಾಗಿ ಸಬಲರಾಗಲು ಸಾಧ್ಯ ಎಂದರು. 

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಸಹ ವಿಸ್ತರಣಾ ನಿದರ್ೇಶಕರಾದ ಡಾ. ಎಸ್.ಬಿ. ಕಲಗಟಗಿ ಮಾತನಾಡಿ, ನಮ್ಮ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಹಿಳೆಯರಿಗಾಗಿ ಕೃಷಿ ತರಬೇತಿಗಳು ತೋಟಗಾರಿಕೆ ತರಬೇತಿಗಳು, ಹೈನುಗಾರಿಕೆ ತರಬೇತಿಗಳು, ಟೇಲ್ರಿಂಗ್ ತರಬೇತಿಗಳು ಸೇರಿದಂತೆ ಮುಂತಾದ ತರಬೇತಿಗಳನ್ನು ನಡೆಸಲಾಗುತ್ತದೆ. ಗ್ರಾಮೀಣ ಭಾಗದ ಮಹಿಳೆಯರು ಇಂತಹ ತರಬೇತಿಯಲ್ಲಿ ಭಾಗವಹಿಸಿ ತರಬೇತಿ ಪಡೆದುಕೊಂಡು ಬ್ಯಾಂಕುಗಳಿಂದ ಸಾಲ ಸೌಲಭ್ಯಗಳ ಪಡೆದುಕೊಂಡು ತಮ್ಮ ಆಥರ್ಿಕ ಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದರು. 

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರಾದ ಡಾ. ಎಸ್.ಎ. ಬಿರಾದಾರ, ಕೆ.ವಿ.ಕೆ. ತಾಂತ್ರಿಕ ಅಧಿಕಾರಿ ಎಸ್.ಸಿ. ರಾಠೋಡ, ಆಹೇರಿ ಬಸವ ವೇದಿಕೆ ಅಧ್ಯಕ್ಷ ಬಂಡೆಪ್ಪ ತೇಲಿ ಮುಂತಾದವರು ಉಪಸ್ಥಿತರಿದ್ದರು. ಕೆ.ವಿ.ಕೆ. ಸಸ್ಯರೋಗ ಶಾಸ್ತ್ರ ವಿಜ್ಞಾನಿ ಡಾ. ಎಸ್.ಎಮ್. ವಸ್ತ್ರದ ಸ್ವಾಗತಿಸಿದರು. ಕೆ.ವಿ.ಕೆ. ತಾಂತ್ರಿಕ ಅಧಿಕಾರಿ ಡಾ|| ಬಿ.ಸಿ. ಕಲ್ಲಾರ ನಿರೂಪಿಸಿದರು. ಗೃಹ ವಿಜ್ಞಾನ ತರಬೇತಿ ಸಂಯೋಜಕರು ವಿಜ್ಞಾನಿ ಡಾ. ಪ್ರೇಮಾ ಬಿ. ಪಾಟೀಲ ವಂದಿಸಿದರು. ಈ ತರಬೇತಿ ಶಿಬಿರದಲ್ಲಿ ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಿಂದ ರೈತ ಮಹಿಳೆಯರು ಭಾಗವಹಿಸಿದ್ದರು.