‘ಸಾಕ್ಷ್ಯಚಿತ್ರ ನಿರ್ಮಾಣದ ತಂತ್ರಗಾರಿಕೆ’ ವಿಷಯದ ಕುರಿತು ಕಾರ್ಯಾಗಾರ
Workshop on ‘Documentary Filmmaking Techniques’
ವಿಜಯಪುರ 16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವುಮೆನ್ ಮೀಡಿಯಾ ಕ್ಲಬ್ ಇವರ ಸಹಯೋಗದಲ್ಲಿ ‘ಸಾಕ್ಷ್ಯಚಿತ್ರ ನಿರ್ಮಾಣದ ತಂತ್ರಗಾರಿಕೆ’ ಎಂಬ ವಿಷಯದ ಕುರಿತು 2 ದಿನಗಳ ಕಾರ್ಯಾಗಾರವನ್ನು ಇದೇ ದಿ. 17 ಮತ್ತು 18 ರಂದು ಬೆಳಿಗ್ಗೆ 10:00 ಗಂಟೆಗೆ ವಿಭಾಗದ ಮಲ್ಟಿಮೀಡಿಯಾ ಲ್ಯಾಬ್‌ನಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿಜಯಪುರದ ಕಲಾರಂಗ ಫಿಲ್ಮ್ ಸ್ಟುಡಿಯೋ ಮತ್ತು ಪ್ರೊಡಕ್ಷನ್ ಸಂಸ್ಥೆಯ ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ದೇವು ಕೆ. ಅಂಬಿಗಾ ಹಾಗೂ ಚಿತ್ರ ನಿರ್ದೇಶಕ ಹಾಗೂ ಸಾಹಿತ್ಯ ಬರಹಗಾರ ವಿನೋದ್ ಪಿ.ರಾಠೋಡ್ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ವಹಿಸಲಿದ್ದಾರೆ.
ಕಾರ್ಯಾಗಾರದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ ಭಾಗವಹಿಸಲಿದ್ದು, ಬೋಧಕ ಬೋಧಕೇತರ ಸಿಬ್ಬಂದಿವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕೋತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದು ಮಹಿಳಾ ವಿವಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 