ಮೆದುಳು ಜ್ವರದ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಾಗಾರ
Workshop to raise awareness about encephalitis
ಲೋಕದರ್ಶನ ವರದಿ
ಹಾವೇರಿ, ಸೆ.10 (ಕರ್ನಾಟಕ ವಾರ್ತೆ): ಸೊಳ್ಳೆಗಳಿಂದ ಹರಡುವ ರೋಗಗಳ ಕುರಿತು ಸಾರ್ವಜನಿಕರು ಅರಿವು ಹೊಂದಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ರೋಗವಾಹಕ ಮತ್ತು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸರಿತಾ ಹೇಳಿದರು.
ನಗರದ ಹಾವೇರಿ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಗುರುವಾರ ಜಿಲ್ಲಾ ರೋಗವಾಹಕ ಹಾಗೂ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮೆದುಳು ಜ್ವರದ ಕುರಿತು ಅರಿವು ಮೂಡಿಸುವ ಜಾಗೃತಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸೊಳ್ಳೆಯ ಜೀವನ ಚಕ್ರ ಹಾಗೂ ಸೊಳ್ಳೆಗಳ ನಿಯಂತ್ರಣ ಕುರಿತು ಪ್ರಾತ್ಯಕ್ಷಿಕೆ ಮೂಲಕ ಲಾರ್ವಾ ಮತ್ತು ಲಾರ್ವಾ ಹಂತದ ಸೊಳ್ಳೆಗಳನ್ನು ತೋರಿಸಿ ಸಮಗ್ರ ಮಾಹಿತಿ ನೀಡಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಮಾತನಾಡಿ, ಮೆದುಳು ಜ್ವರ ಹರಡುವ ವಿಧಾನ, ಲಕ್ಷಣಗಳು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಗಾರ ಆಯೋಜಿಸಲಾಗಿದ್ದು, ಅಧಿಕಾರಿಗಳು ತಮ್ಮ ಹಂತದಲ್ಲಿ ಆರೋಗ್ಯ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.
ಕಾರ್ಯಾಗಾರದಲ್ಲಿ ಎಂಟಮಾಲಜಿಸ್ಟ್ ಅಧಿಕಾರಿ ಶ್ರೀಕಾಂತ ಪಾಟೀಲ, ಆರ್ಡಿಪಿಐ ಉಪನ್ಯಾಸಕ ಮೌಲಾಸಾಬ್ ಯಲವಗಿ, ಕೆ.ಎಂ. ಕೊರಳಹಳ್ಳಿ, ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಕೆ.ಎಸ್. ಕೃಷ್ಣಪ್ಪ ಸ್ವಾಗತಿಸಿದರು. ಚಂದ್ರಶೇಖರ ಹಿತ್ತಲಮನಿ ಕಾರ್ಯಕ್ರಮ ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 