ಪದವಿ ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ಧಿಗೆ ಕಾರ್ಯಾಗಾರಗಳು ಅಗತ್ಯ: ಎಲ್.ಎಲ್. ಗುಳೇದಗುಡ್ಡ
Workshops for skill development are essential alongside degree education: L.L. Guledagudda
ಲೋಕದರ್ಶನ ವರದಿ
ನರೇಗಲ್, ಆ. ೨೪: ವಿದ್ಯಾರ್ಥಿ ಜೀವನ ಹಾಗೂ ಪದವಿ ಶಿಕ್ಷಣದ ಅವಧಿ ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಅತ್ಯಂತ ಮಹತ್ವದ ಹಂತವಾಗಿದೆ. ಈ ಅಮೂಲ್ಯ ಸಮಯವನ್ನು ಸದುಪಯೋಗಪಡಿಸಿಕೊಂಡು ನಿರಂತರ ಪರಿಶ್ರಮ ಹಾಗೂ ಏಕಾಗ್ರತೆಯಿಂದ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲ ಎಲ್.ಎಲ್. ಗುಳೇದಗುಡ್ಡ ಹೇಳಿದರು.
ನರೇಗಲ್ ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಂಡವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಆಶ್ರಯದಲ್ಲಿ ಆಯೋಜಿಸಿದ್ದ ವಿವಿಧ ವಿಷಯಗಳ ಸರಣಿ ಕಾರ್ಯಾಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಲೇಜಿನಲ್ಲಿ ಆಯೋಜಿಸುವ ಕಾರ್ಯಾಗಾರಗಳು ವಿದ್ಯಾರ್ಥಿಗಳನ್ನು ಕೇವಲ ಪದವೀಧರರನ್ನಾಗಿ ಮಾಡುವುದಲ್ಲದೆ, ಉದ್ಯೋಗಾರ್ಹ ಹಾಗೂ ಸಾಮಾಜಿಕ ಜವಾಬ್ದಾರಿಯುಳ್ಳ ವ್ಯಕ್ತಿಗಳನ್ನಾಗಿ ರೂಪಿಸುತ್ತವೆ. ಆದ್ದರಿಂದ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಕ್ರಮಕ್ಕೆ ಸೀಮಿತವಾಗದೆ, ಗುಣಮಟ್ಟದ ಹಾಗೂ ಪ್ರಸ್ತುತ ಮಾರುಕಟ್ಟೆಗೆ ಅಗತ್ಯವಿರುವ ಕೌಶಲ್ಯಾಧಾರಿತ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ತಜ್ಞರ ಮಾರ್ಗದರ್ಶನದಲ್ಲಿ ನಡೆಯುವ ಇಂತಹ ಕಾರ್ಯಾಗಾರಗಳಿಂದ ವಿದ್ಯಾರ್ಥಿಗಳು ವಿಷಯವಾರು ಮಾಹಿತಿಯನ್ನು ಪರಿಣಾಮಕಾರಿಯಾಗಿ ಕಲಿಯಲು ಸಾಧ್ಯವಾಗುತ್ತದೆ. ತಂತ್ರಜ್ಞಾನ, ಕಲೆ, ಸಂಶೋಧನೆ ಸೇರಿದಂತೆ ವಿವಿಧ ಕ್ಷೇತ್ರಗಳ ಕುರಿತು ನಡೆಯುವ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿನ ಕೌಶಲ್ಯದ ಕೊರತೆಯನ್ನು ನೀಗಿಸುವುದರ ಜೊತೆಗೆ ಹೊಸ ವಿಚಾರಗಳನ್ನು ಪ್ರಯೋಗಿಸುವ ಧೈರ್ಯ ಮತ್ತು ಉದ್ಯೋಗ ಸಂದರ್ಶನಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲೆ ಡಾ. ಕಸ್ತೂರೇವ್ವ ದಳವಾಯಿ, ಕೇವಲ ಪಠ್ಯಪುಸ್ತಕದ ಜ್ಞಾನ ಹಾಗೂ ಅಂಕಪಟ್ಟಿಗಳಿAದ ವಿದ್ಯಾರ್ಥಿಯ ಭವಿಷ್ಯ ನಿರ್ಧರಿಸಲು ಸಾಧ್ಯವಿಲ್ಲ. ತರಗತಿಯ ನಾಲ್ಕು ಗೋಡೆಗಳಾಚೆಗಿನ ಪ್ರಾಯೋಗಿಕ ಜ್ಞಾನ ಹಾಗೂ ಉದ್ಯಮ ಕ್ಷೇತ್ರದ ವಾಸ್ತವ ಅಗತ್ಯಗಳನ್ನು ಅರಿಯುವುದು ಇಂದಿನ ತುರ್ತು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾಲೇಜುಗಳಲ್ಲಿ ನಿಯಮಿತವಾಗಿ ಆಯೋಜಿಸುವ ಕಾರ್ಯಾಗಾರಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿ ಬದುಕಿಗೆ ಭದ್ರ ಬುನಾದಿ ಹಾಕುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಐಕ್ಯೂಎಸಿ ಸಂಚಾಲಕ ಜಯಶ್ರೀ ಮುತಗಾರ ಮಾತನಾಡಿ, ಪದವಿ ಹಂತದ ದಿನಗಳು ಯುವಜನರ ಬದುಕಿನ ಗತಿಯನ್ನು ನಿರ್ಧರಿಸುವ ಮಹತ್ವದ ಅವಧಿಯಾಗಿದೆ. ಸಾಮಾಜಿಕ ಜಾಲತಾಣಗಳು ಹಾಗೂ ಅನಗತ್ಯ ಚಟುವಟಿಕೆಗಳಿಗೆ ಸಮಯ ವ್ಯರ್ಥ ಮಾಡದೆ, ಪ್ರತಿದಿನ ಓದಿಗೆ ನಿಗದಿತ ಸಮಯ ಮೀಸಲಿಟ್ಟು ಶಿಸ್ತು ಬೆಳೆಸಿಕೊಳ್ಳಬೇಕು. ಕಾಲೇಜಿನಲ್ಲಿ ದೊರೆಯುವ ಶೈಕ್ಷಣಿಕ ಅವಕಾಶಗಳನ್ನು ಬಳಸಿಕೊಂಡು ಸಾಧನೆ ಮಾಡಿ ಹೆತ್ತವರಿಗೆ ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಕನ್ನಡ ವಿಷಯ ಕುರಿತು ಶಿವಮೂರ್ತಪ್ಪ ಕುರೇರ, ಇಂಗ್ಲಿಷ್ ಕುರಿತು ನಸ್ರೀನಾಬಾನು ಜಮಾದಾರ, ಭೌತಶಾಸ್ತöç ಕುರಿತು ಭೀಮಸೇನ ಉಗ್ರದ, ಗಣಿತ ಕುರಿತು ಬಸವರಾಜ ಬಳಗಾನೂರ, ವಾಣಿಜ್ಯ ಕುರಿತು ಮಹಾಂತೇಶ ಮುಧೋಳ, ಇತಿಹಾಸ ಕುರಿತು ಮಾರುತಿ ಹಾಗೂ ಅರ್ಥಶಾಸ್ತöç ಕುರಿತು ರಾಜು ಬಿ.ಕೆ. ಅವರು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಎಸ್.ಎಸ್. ಸೂಡಿ, ಸುನಂದಾ ಮುಂಜಿ, ಅನಿಲಕುಮಾರ, ಶಿವಪ್ಪ ಕುರಬರ, ವಿರೂಪಾಕ್ಷ ಆರ್., ಅಯ್ಯಪ್ಪ, ಎನ್.ಎಸ್. ಹೊನ್ನೂರ, ವಿ.ಸಿ. ಇಲ್ಲೂರ, ಪಿ.ವೈ. ಶಾಸ್ತಿöç, ಕೆ.ಎನ್. ಕಟ್ಟಿಮನಿ, ವಿವೇಕಾನಂದ ಹಿರೇಮಠ, ಶರಣಪ್ಪ ಚಿಕ್ಕನಕೋಪ್ಪ, ಶಂಕರಗೌಡ ಪಾಟೀಲ, ಎಂ.ಎಫ್. ತಹಶೀಲ್ದಾರ್, ಎಸ್.ಆರ್. ನದಾಫ್ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಾಗಾರಕ್ಕೆ ಚಾಲನೆ
ನರೇಗಲ್ ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಂಡವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಆಶ್ರಯದಲ್ಲಿ ನಡೆದ ವಿವಿಧ ವಿಷಯಗಳ ಸರಣಿ ಕಾರ್ಯಾಗಾರಕ್ಕೆ ನಿವೃತ್ತ ಪ್ರಾಂಶುಪಾಲ ಎಲ್.ಎಲ್. ಗುಳೇದಗುಡ್ಡ ಚಾಲನೆ ನೀಡಿ ಮಾತನಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 