ಅಹಮದಾಬಾದ್, ೧೩ಈವರೆಗೆ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಎಂಬ ಹೆಗ್ಗಳಿಕೆ ಪಡೆದು ಕೊಂಡಿದ್ದ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ಕೆಲವೇ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಸೀಮಿತಗೊಳ್ಳಲಿದೆ. ಗುಜರಾತ್ ನ ಅಹಮದಾಬಾದ್ ನಲ್ಲಿ ನಿರ್ಮಿಸಿರುವ ಕ್ರಿಕೆಟ್ ಸ್ಟೇಡಿಯಂ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ಅಹಮದಾಬಾದ್‌ನ ಹೊಸ ಕ್ರಿಕೆಟ್ ಕ್ರೀಡಾಂಗಣ ಮುಂದಿನ ವರ್ಷದ ಆರಂಭದಲ್ಲಿ ಅಂತರರಾಷ್ಟ್ರೀಯ ಪಂದ್ಯವನ್ನು ಆಯೋಜಿಸಲು ಸಜ್ಜಾಗಿದೆ. ೭೦೦ ಕೋಟಿ ರೂ.ಗಳ ವೆಚ್ಚದಲ್ಲಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಕ್ರೀಡಾಂಗಣದ ಸಾಮರ್ಥ್ಯ ಒಂದು ಲಕ್ಷ ೧೦ ಸಾವಿರ.ಅಹಮದಾಬಾದ್‌ನ ಹೊಸ ಕ್ರೀಡಾಂಗಣ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದ ಒಂದು ಲಕ್ಷ ಸಾಮರ್ಥ್ಯವನ್ನು ಮೀರಿಸಲು ಸಜ್ಜಾಗಿದೆ. ಇದರಲ್ಲಿ ೭೦ ಕಾರ್ಪೊರೇಟ್ ಬಾಕ್ಸ್ ಗಳು, ಮತ್ತು ನಾಲ್ಕು ಡ್ರೆಸ್ಸಿಂಗ್ ರೂಂಗಳನ್ನು ಒಳಗೊಂಡಿದೆ. ಮತ್ತೊಂದೆಡೆ, ಇದು ಒಲಿಂಪಿಕ್ಸ್ ಗಾತ್ರದ ಈಜುಕೊಳವನ್ನೂ ಒಳಗೊಂಡಿದೆ. ಕ್ರೀಡಾಂಗಣದ ನಿರ್ಮಾಣ ೨೦೧೭ ರ ಜನವರಿಯಲ್ಲಿ ಆರಂಭಗೊಂಡಿದ್ದು, ಕಾಮಗಾರಿ ಪೂರ್ಣಗೊಳ್ಳಲು ಸುಮಾರು ಮೂರು ವರ್ಷಗಳ ಅವಧಿ ತೆಗೆದುಕೊಂಡಿದೆ. ಇದಕ್ಕೂ ಮುನ್ನ ಇಲ್ಲಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಕ್ರೀಡಾಂಗಣವನ್ನು ಸಂಪೂರ್ಣವಾಗಿ ನೆಲಸಮಗೊಳಿಸಿ ಹೊಸ ಕ್ರೀಡಾಂಗಣ ನಿರ್ಮಿಸಲಾಗಿದೆ. ಮುಂದಿನ ವರ್ಷದ ಮಾರ್ಚ್‌ನಲ್ಲಿ ಇಲ್ಲಿ ನಡೆಯಲಿರುವ ಪಂದ್ಯಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಅಸಿಯಾ ಇಲೆವೆನ್ ? ವಿಶ್ವ ಇಲೆವೆನ್ ಪಂದ್ಯವನ್ನು ಇಲ್ಲಿ ನಡೆಸಲು ವ್ಯವಸ್ಥೆ ಮಾಡಲಾಗುತ್ತಿದೆ. ಈ ಹಿಂದೆ ಭಾರತದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಕೋಲ್ಕತ್ತಾದ ಈಡನ್ ಗಾರ್ಡನ್ ಆಗಿತ್ತು. ಇದರ ಸಾಮರ್ಥ್ಯ ಸುಮಾರು ಒಂದು ಲಕ್ಷ ಇದ್ದರೂ, ಪ್ರಧಾನ ಕಟ್ಟಡ ಮತ್ತೆ ನಿರ್ಮಿಸಿ ಅದನ್ನು ೬೬,೦೦೦ ಕ್ಕೆ ಇಳಿಸಲಾಗಿದೆ.