ವಿಶ್ವ ಏಡ್ಸ್ ದಿನ: ಜಾಗೃತಿ ಜಾಥಾಕ್ಕೆ ಸಿ.ಡಿ. ಗೀತಾ ಅವರಿಂದ ಚಾಲನೆ

ಕೊಪ್ಪಳ 01: ಕೊಪ್ಪಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕನರ್ಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ವತಿಯಿಂದ "ವಿಶ್ವ ಏಡ್ಸ್ ದಿನ" ಅಂಗವಾಗಿ ನಗರದಲ್ಲಿ ಆಯೋಜಿಸಲಾದ ಜಾಗೃತಿ ಜಾಥಕ್ಕೆ ಅಪರ ಜಿಲ್ಲಾಧಿಕಾರಿ ಸಿ.ಡಿ.ಗೀತಾ ಅವರು ಚಾಲನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿರೂಪಾಕ್ಷರೆಡ್ಡಿ ಮಾದಿನೂರು, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಬಿ.ಜಂಬಯ್ಯ, ಜಿಲ್ಲಾ ಕುಷ್ಠರೋಗನಿಯಂತ್ರಣಾಧಿಕಾರಿ ಡಾ. ಎಸ್.ಕೆ. ದೇಸಾಯಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ರಾಮಾಂಜನೇಯ, ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಚೇರ್ಮೆನ್ ಡಾ. ಕೆ.ಜಿ. ಕುಲಕಣರ್ಿ, ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಸ್ವಯಂಸೇವಾ ಸಂಸ್ಥೆಯ ಸಿಬ್ಬಂದಿಗಳು, ಸೇಂಟ್ ಫಾಲ್ಸ್ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾಥರ್ಿಗಳು, ಕಲ್ವಾರಿಚಾಪೆಲ್ ಸಿಬ್ಬಂದಿವರ್ಗ, ಆಶಾ ಕಾರ್ಯಕತರ್ೆಯರು ಜಾಥಾದಲ್ಲಿ ಭಾಗವಹಿಸಿದ್ದರು.  

ಜಾಥಾ ಕಾರ್ಯಕ್ರಮದಲ್ಲಿ ಗೀಗೀ ಮತ್ತು ಜಾನಪದ ಕಲಾಮೇಳ ತಂಡವು ಗವಿಮಠ ಮತ್ತು ಬಸ್ಸ್ಟ್ಯಾಂಡ್ನಲ್ಲಿ ಹೆಚ್.ಐ.ವಿ. ಏಡ್ಸ್ ಕುರಿತು ಹಾಡಿನ ಮುಖಾಂತರ ಅರಿವು ಮೂಡಿಸಲಾಯಿತು.  ಜಾಗೃತಿ ಜಾಥಾ ಕಾರ್ಯಕ್ರಮವು ಗವಿಮಠ ಆವರಣದಿಂದ ಶಾರದಾ ಚಿತ್ರಮಂದಿರ, ಕಿತ್ತೂರರಾಣಿ ಚೆನ್ನಮ್ಮ ವೃತ್ತದ ಮಾರ್ಗವಾಗಿ ಹಸನ್ ರಸ್ತೆಯ ಮೂಲಕ ಬಸ್ಸ್ಟ್ಯಾಂಡ್ ಮಾರ್ಗವಾಗಿ ಹಳೆಯ ಜಿಲ್ಲಾ ಆಸ್ಪತ್ರೆಯ ಆವರಣದವರೆಗೆ ಯಶಸ್ವಿಯಾಗಿ ಜರುಗಿತು.