ವಿಶ್ವ ಆಲ್ಝೈಮರ್ಸ ದಿನ: ನೇರ ಫೋನ್-ಇನ್ ಕಾರ್ಯಕ್ರಮ
ಬೆಳಗಾವಿ 19: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ವಿಶ್ವವಿದ್ಯಾಲಯ ಬೆಳಗಾವಿ ಮತ್ತು ಕೆಎಲ್‌ಇ ಸಂಸ್ಥೆಯ ಶ್ರೀ ಬಿ. ಎಮ್. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಬೆಳಗಾವಿ ಇವರ ಸಹಯೋಗದಲ್ಲಿ ಶುಕ್ರವಾರ ದಿ. 19ನೇ ಸೆಪ್ಟೆಂಬರ್ 2025 ರಂದು ವಿಶ್ವ ಆಲ್ಝೈಮರ್ಸ ದಿನ ಅಂಗವಾಗಿ ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆಎಲ್‌ಇ ಬಿ. ಎಮ್. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಮತ್ತು ಪ್ರಾಚಾರ್ಯರಾದ ಡಾ. ಸುಹಾಸ ಕುಮಾರ ಶೆಟ್ಟಿ ಅವರು ಭಾಗವಹಿಸಿ ಮರೆವಿನ (ಆಲ್ಝೈಮರ್ಸ) ಕಾಯಿಲೆ ಕುರಿತು ಪ್ರಶ್ನೋತ್ತರ ಮೂಲಕ ಜನಜಾಗೃತಿ ಮೂಡಿಸಿದರು.
ಮನುಷ್ಯರಿಗೆ ವಯಸ್ಸಾದ ಬಳಿಕ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಂಡುಬರುತ್ತವೆ, ಅವುಗಳಲ್ಲಿ ಪ್ರಮುಖವಾದ ಸಮಸ್ಯೆ ಎಂದರೆ ಮರೆವಿನ ಕಾಯಿಲೆ. ವಯಸ್ಸಾದ ಬಳಿಕ ಒಂದೊಂದೇ ವಿಷಯದ ಬಗ್ಗೆ ಜ್ಞಾಪಕ ಶಕ್ತಿ ಕಡಿಮೆಯಾಗುತ್ತಾ ಹೋಗುವುದೇ ಆಲ್ಝೈಮರ್ ಎನ್ನುತ್ತೇವೆ, ಇಂದು ವಿಶ್ವದಾದ್ಯಂತ ಬಹಳ ಗಂಭೀರವಾದ ಕಾಯಿಲೆಯಾಗಿದೆ ಆದ್ದರಿಂದ ಸಾಮಾನ್ಯ ಜನರಿಗೆ ಈ ರೋಗದ ಕುರಿತು ಜನ ಜಾಗೃತಿ ಮೂಡಿಸಲು ಸೆಪ್ಟೆಂಬರ್ 21 ರಂದು ವಿಶ್ವ ಆಲ್ಝೈಮರ್ಸ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.
ಈ ಕಾಯಿಲೆಯ ಪ್ರಮುಖ ಲಕ್ಷಣ ಎನೆಂದರೆ ವಯಸ್ಸಾದ ಬಳಿಕ ಜ್ಞಾಪಕ ಶಕ್ತಿ ಕಡಿಮೆಯಾಗುತ್ತಾ ಹೋಗುವುದು. ಈ ಆಲ್ಝೈಮರ್ ರೋಗಿಗಳನ್ನು ಕೀಳಾಗಿ ಕಾಣದೆ ಅವರನ್ನು ಸಮಾಜದ ಮುಖ್ಯವಾಹಿನೆ ತರಬೇಕು, ಅವರ ಆತ್ಮಸ್ಥೈರ್ಯ ಕುಸಿಯುವಂತಹ ಕೇಲಸಮಾಡಬಾರದು, ಕುಟುಂಬದವರು ಅವರನ್ನು ಅತಿಯಾದ ಕಾಳಜಿ ಮತ್ತು ಪ್ರೀತಿಯಂದ ಕಾಣಬೇಕು ಎಂದರು. ಈ ಮರೆವು ಕಾಯಿಲೆ ಹೋಗಲಡಿಸಲು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿರುವುದು ಮುಖ್ಯ, ನಕಾರಾತ್ಮಕ ಆಲೋಚನೆಗಳು ಮನಸ್ಸಿನ ಮೇಲೆ ಪರಿಣಾಮ ಬೀರಲು ಬೀಡದೇ ಸಕರಾತ್ಮಕ ಆಲೋಚನೆಗಳಿಂದ ಸಂತೋಷವಾಗಿರಬೇಕು, ಹಿರಿಯರ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅತ್ಯಗತ್ಯ ಎಂದು ತಿಳಿಸಿದರು ಮತ್ತು ಬೆಳಗಾವಿ ಶಾಹಪೂರದ ಕೆಎಲ್‌ಇ ಸಂಸ್ಥೆಯ ಶ್ರೀ ಬಿ. ಎಮ್. ಕಂಕಣವಾಡಿ ಆಯುರ್ವೇದ ಆಸ್ಪತ್ರೆಯಲ್ಲಿ ಲಭ್ಯವಿರುವ ಚಿಕಿತ್ಸೆಗಳ ಕುರಿತು ಮಾಹಿತಿ ಹಂಚಿಕೊಂಡರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು.
ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 