ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ
World Anti-Drug Day: Raibag
ರಾಯಬಾಗ, 26 : ಯುವಕರು ಮಾದಕ ಪದಾರ್ಥ ಸೇವನೆಯಿಂದ ದಾರಿ ತಪ್ಪುತ್ತಿರುವುದರಿಂದ ಸಾಮಾಜಿಕ ಸ್ವಾಸ್ಥ್ಯ ಹದಗೆಡುತ್ತಿದೆ ಎಂದು ಪಿಎಸ್‌ಐ ನರಸಿಂಹರಾಜು ಹೇಳಿದರು.
ಗುರುವಾರ ತಾಲೂಕಿನ ನಸಲಾಪುರ ಗ್ರಾಮದ ಗುಂಡಪ್ಪ ಕಾಂತೆ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಹದಿಹರೆಯದ ಯುವ ಜನಾಂಗ ಮಾದಕ ವಸ್ತುಗಳ ವ್ಯಸನರಾಗುತ್ತಿರುವುದರಿಂದ ಅಪರಾಧಗಳ ಸಂಖ್ಯೆ ಹೆಚ್ಚುತ್ತಿವೆ. ಪಾಲಕರು ತಮ್ಮ ಮಕ್ಕಳ ಕಡೆಗೆ ಹೆಚ್ಚಿನ ಗಮನ ಹರಿಸಿ, ಅವರು ದಾರಿ ತಪ್ಪದಂತೆ ನೋಡಿಕೊಳ್ಳಬೇಕು. ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರ ನೀಡಬೇಕೆಂದರು.
ತಾಲೂಕು ಯೋಜನಾಧಿಕಾರಿ ಮಹೇಶ್ವರ್ಪ ಜಿ ಅವರು ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಎಸ್ ಕೆ ಮಾಲಗಾಂವೆ ಅವರು ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯ ಆರ್ ಡಿ ಪಾಟೀಲ್, ಜನಜಾಗೃತಿ ವೇದಿಕೆ ಸದಸ್ಯ ಜಿನೇಂದ್ರ ಖೆಮಲಾಪುರೆ, ವಲಯ ಮೇಲ್ವಿಚಾರಕಿ ಮಂಜುಳಾ ಚಂದ್ರಶೇಖರ, ಕೃಷಿ ಮೇಲ್ವಿಚಾರಕ ಗೋಪಾಲ ಕುಂಬಾರ, ಸೇವಾ ಪ್ರತಿನಿಧಿ ಜಯಶ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 