ವಿಶ್ವ ಜೇನು ದುಂಬಿ ದಿನ: ಮುಂಡಗೋಡದಲ್ಲಿ ವೈಜ್ಞಾನಿಕ ಜೇನು ಬೇಸಾಯ ತರಬೇತಿ
World Beekeeping Day: Scientific beekeeping training in Mundagoda
ಲೋಕದರ್ಶನ ವರದಿ
ಮುಂಡಗೋಡ 27 : ವಿಶ್ವ ಜೇನು ದುಂಬಿ ದಿನದ ಅಂಗವಾಗಿ ವೈಜ್ಞಾನಿಕ ಜೇನು ಬೇಸಾಯ ಪದ್ಧತಿಯ ಕುರಿತು ಜೇನುಕೃಷಿ ಆಸಕ್ತ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ತೋಟಗಾರಿಕೆ ಇಲಾಖೆ ಮುಂಡಗೋಡ ವತಿಯಿಂದ ಬುಧವಾರ ಆಯೋಜಿಸಲಾಯಿತು.
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ, ಮುಂಡಗೋಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಭಾಗಗಳ ರೈತರು ಭಾಗವಹಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೃಷ್ಣ ಟಿ. ಕುಳ್ಳೂರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, “ಜೇನು ಸಾಕಾಣಿಕೆಯಿಂದ ರೈತರ ಆರ್ಥಿಕ ಮಟ್ಟ ಸುಧಾರಣೆಯಾಗುವುದಲ್ಲದೆ, ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗೆ ಸಬ್ಸಿಡಿ ರೂಪದಲ್ಲಿ ಆರ್ಥಿಕ ಸಹಾಯವೂ ದೊರೆಯುತ್ತದೆ” ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯಲ್ಲಾಪುರದ ತಿಮ್ಮಣ್ಣ ಭಟ್ ಅವರು ಜೇನು ಕೃಷಿಯ ವೈಜ್ಞಾನಿಕ ವಿಧಾನಗಳು, ನಿರ್ವಹಣೆ ಹಾಗೂ ಉತ್ಪಾದನಾ ತಂತ್ರಗಳ ಕುರಿತು ರೈತರಿಗೆ ಸಂಪೂರ್ಣ ಮಾಹಿತಿ ನೀಡಿದರು. ಅತಿಥಿಗಳಾಗಿ ಭಾಗವಹಿಸಿದ್ದ ನ್ಯಾಯವಾದಿ ಹಾಗೂ ಜೇನು ಕೃಷಿಕ ಸಂಗಮೇಶ ಕೋಳಾನವರ ಅವರು ಜೇನು ಕೃಷಿಯಲ್ಲಿನ ತಮ್ಮ ಸುದೀರ್ಘ ಅನುಭವ, ಅಧ್ಯಯನ ಹಾಗೂ ಅದರ ಲಾಭಗಳ ಕುರಿತು ಸವಿಸ್ತಾರವಾಗಿ ತಿಳಿಸಿದರು.
ಲ್ಲಾ ನಾರಿಶಕ್ತಿ ಪ್ರಶಸ್ತಿ ಪುರಸ್ಕೃತರಾದ ಪುಷ್ಪಾ ಗುಲ್ಯಾನವರ ಅವರು ಜೇನು ಕೃಷಿಯಲ್ಲಿ ತಮ್ಮ ಅನುಭವ ಹಂಚಿಕೊಂಡು ಮಹಿಳೆಯರು ಈ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಸುರೇಶ ಕಲ್ಲೋಳ್ಳಿ ಅವರು ಮಾತನಾಡಿ, ಪರಿಶಿಷ್ಟ ಪಂಗಡದ ಅರಣ್ಯ ಭೂಮಿ ಹಕ್ಕುಪತ್ರ ಹೊಂದಿರುವ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಜೇನು ಪೆಟ್ಟಿಗೆ ಸಹಾಯಧನ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕೃಷಿ ಸಖಿಯರು, ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ರಮೇಶ ಜಿ. ಜಮಖಂಡಿ ಹಾಗೂ ರಾಮಪ್ಪ ನಡುವಿನಮನಿ, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಕ್ಷೇತ್ರಾಧಿಕಾರಿ ಶಾಂತಕುಮಾರ ಸೇರಿದಂತೆ ಜೇನು ಕೃಷಿ ಆಸಕ್ತ 50ಕ್ಕೂ ಹೆಚ್ಚು ರೈತರು ಉಪಸ್ಥಿತರಿದ್ದರು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 