ವಿಶ್ವ ರಕ್ತದಾನಿಗಳ ದಿನ: ರಕ್ತದಾನ ಮಾಡಿದವರನ್ನು ಸನ್ಮಾನ ಮಾಡಲು ನಿರ್ಧಾರ

ಬಳ್ಳಾರಿ, ಜೂ.12: ವಿಶ್ವ ರಕ್ತದಾನಿಗಳ ದಿನಾಚರಣೆಯ ಕಾರ್ಯಕ್ರಮವನ್ನು ಈ ಬಾರಿ ಜೂ.20ರಂದು ನಡೆಸಲು ತೀಮರ್ಾನಿಸಲಾಗಿದ್ದು, ಈ ಸಂದರ್ಭದಲ್ಲಿ 25ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದವರನ್ನು ಅಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಹೆಚ್ಐವಿ ಏಡ್ಸ್ ನಿಯಂತ್ರಣ ಮತ್ತು ನಿವರ್ಾಹಕ ಘಟಕದ ಮೇಲ್ವಿಚಾರಕರಾದ ಬಿ.ಗಿರೀಶ್ ಹೇಳಿದರು. 

     ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಡ್ಯಾಪ್ಕು ಸಭಾಂಗಣದಲ್ಲಿ ಶುಕ್ರವಾರ ವಿಶ್ವ ರಕ್ತದಾನಿಗಳ ದಿನಾಚರಣೆ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿವರ್ಾಹಕ ಘಟಕ ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಟಿ.ಇಂದ್ರಾಣಿಯವರ ಇವರ ಸೂಚನೆಯ ಮೇರೆಗೆ ಕೊವೀಡ್-19 ಹಿನ್ನೆಲೆಯಲ್ಲಿ ಜೂನ್ 14 ರಂದು ನಡೆಯಬೇಕಾಗಿರುವ ವಿಶ್ವರಕ್ತದಾನಿಗಳ ದಿನಾಚರಣೆಯನ್ನು ಜೂನ್ 20 ರಂದು ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಲಿದೆ. ಪ್ರತಿ ವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ,ಆದರೆ ಈ ಬಾರಿ ಕರೋನಾ ಇರುವುದರಿಂದ ಜೂನ್ 20 ರಂದು ಆಚರಿಸಲಾಗುತ್ತದೆ. 

  ರಕ್ತದಾನದ ಕುರಿತು ಜಾಗೃತಿ ಮೂಡಿಸುವುದು ಮತ್ತು ಪ್ರತಿ ವ್ಯಕ್ತಿಯು ಒಂದು ವರ್ಷದಲ್ಲಿ 4 ಬಾರಿ ಹಾಗೂ ಮಹಿಳೆಯು ಒಂದು ವರ್ಷದಲ್ಲಿ 3 ಬಾರಿ ರಕ್ತದಾನ ಮಾಡಬಹುದು ಹಾಗೂ ರಕ್ತದಾನ ಮಾಡುವವರು ಅವರ ಸ್ನೇಹಿತರು ಮತ್ತು ಕುಟುಂಬದವರನ್ನು ರಕ್ತದಾನ ಮಾಡಲು ಪ್ರೇರೆಪಿಸಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.  

        ರಕ್ತದಾನ ಮಾಡುವ ಸಂದರ್ಭದಲ್ಲಿ 50 ಕ್ಕಿಂತ ಹೆಚ್ಚಿನ ಜನ ಸೇರಬಾರದು ಹಾಗೂ ಎಲ್ಲರೂ ತಪ್ಪದೇ ಮಾಸ್ಕ್ ಹಾಕಿಕೊಳ್ಳಬೇಕು, ಸ್ಯಾನಿಟೈಜರ್ ಬಳಸುವುದು ಹಾಗೂ  ಸಾಮಾಜಿಕ ಅಂತರ ಕಾಪಾಡಬೇಕು ಎಂದರು. 25ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದವರು ತಮ್ಮ ಪ್ರಮಾಣ ಪತ್ರಗಳೊಂದಿಗೆ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

"ಖಚಿಜಿಜ ಛಟಠಠಜ ಚಿತಜ ಟತಜ" "ಉತಜ ಃಟಠಠಜ & ಟಚಿಞಜ ತಿಠಡಿಟಜ ಚಿ ಜಚಿಟಣಜಡಿ ಠಿಟಚಿಛಿಜ" ಎಂಬ ಈ ವರ್ಷದ ಧ್ಯೇಯ ವಾಕ್ಯದೊಂದಿಗೆ ಈ ವರ್ಷ ಆಚರಣೆ ಮಾಡಲಾಗುತ್ತದೆ ಎಂದರು. 

 ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಷಕೀಬ್, ವಿಮ್ಸ್ ರಕ್ತ ಭಂಡಾರ ವೈದ್ಯಾಧಿಕಾರಿ ಸೇರಿದಂತೆ ವಿವಿಧ ರಕ್ತ ಭಂಡಾರ ಸಂಸ್ಥೆಗಳ ಶ್ರೀಕಾಂತ್, ಹೊನ್ನೂರಪ್ಪ ಸೇರಿದಂತೆ ಇತರರು ಇದ್ದರು.