ವಿಶ್ವ ಮೆದುಳು ದಿನಾಚರಣೆ: ವಿದ್ಯಾರ್ಥಿಗಳಿಗೆ ಚಿತ್ರಕಲೆ, ಆಹಾರ ತಯಾರಿ ಸ್ಪರ್ಧೆ
World Brain Day: Drawing and food preparation competitions for students
ಲೋಕದರ್ಶನ ವರದಿ
ಗದಗ, ಜು. 30: ವಿಶ್ವ ಮೆದುಳು ದಿನಾಚರಣೆ ಅಂಗವಾಗಿ ಹಿರ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಚಿತ್ರಕಲೆ ಸ್ಪರ್ಧೆ ಹಾಗೂ ಬೆಂಕಿ ಬಳಸದೆ ಆಹಾರ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭಿ) ಜಿಲ್ಲಾ ಸಂಯೋಜಕರು, ಮೆದುಳಿನ ಆರೋಗ್ಯ ಕಾಪಾಡಲು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ವಾಹನ ಚಾಲನೆಯ ವೇಳೆ ಸೀಟ್ಬೆಲ್ಟ್ ಹಾಗೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪಾ ಪಾಟೀಲ ಮಾತನಾಡಿ, ಸಮಯಕ್ಕೆ ಸರಿಯಾಗಿ ನಿದ್ರೆ ಮಾಡುವುದು, ಯೋಗಾಭ್ಯಾಸ ಹಾಗೂ ನಿಯಮಿತ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು.
ಕಭಿ ಕಾರ್ಯಕ್ರಮದ ಕ್ಲಿನಿಕಲ್ ಮನಶ್ಶಾಸ್ತ್ರಜ್ಞ ರೇವಣಸಿದ್ದಪ್ಪ ಅವರು ವಿದ್ಯಾರ್ಥಿಗಳಲ್ಲಿ ಒತ್ತಡ ನಿರ್ವಹಣೆ, ಮಾನಸಿಕ ಆರೋಗ್ಯ ಹಾಗೂ ಆತ್ಮವಿಶ್ವಾಸ ವೃದ್ಧಿ ಕುರಿತು ಮಾಹಿತಿ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗೀತಾ ಎಸ್. ಸಿಂದಗಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜ್ಞಾಪಕಶಕ್ತಿ, ಏಕಾಗ್ರತೆ ಹಾಗೂ ಆರೋಗ್ಯಕರ ಅಭ್ಯಾಸಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಕಾರ್ಯಕ್ರಮವನ್ನು ಸಮಾರೋಪಗೊಳಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 