ವಿಶ್ವ ಮೆದುಳು ದಿನಾಚರಣೆ: ವೃದ್ಧಾಶ್ರಮದಲ್ಲಿ ಆರೋಗ್ಯ ಜಾಗೃತಿ, ತಪಾಸಣೆ
World Brain Day: Health awareness and check-up at an old age home
ಲೋಕದರ್ಶನ ವರದಿ
ಗದಗ, ಜು. 30: ವಿಶ್ವ ಮೆದುಳು ದಿನಾಚರಣೆ ಅಂಗವಾಗಿ ಜುಲೈ 29ರಂದು ನಗರದ ‘ಜೀವನ ಸಂಧ್ಯಾ ಸುಖಾಲಯ’ ವೃದ್ಧಾಶ್ರಮದಲ್ಲಿ ಮೆದುಳಿನ ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಹಾಗೂ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭಿ) ಕಾರ್ಯಕ್ರಮದ ಅಧಿಕಾರಿ ಡಾ. ಜಿ.ಎಸ್. ಪಲ್ಲೇದ್ ಅವರು, ಮೆದುಳಿನ ಆರೋಗ್ಯ ಕಾಪಾಡುವ ಅಗತ್ಯತೆ ಹಾಗೂ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿ ಲಭ್ಯವಿರುವ ಸೇವೆಗಳ ಕುರಿತು ಮಾಹಿತಿ ನೀಡಿದರು. ಸಾರ್ವಜನಿಕರು ಕಾರ್ಯಕ್ರಮದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಜಿಲ್ಲಾ ಸಂಯೋಜಕ ಪ್ರವೀಣ ಎಸ್. ರೋಣದ ಅವರು ಕಾರ್ಯಕ್ರಮದ ಉದ್ದೇಶ ಹಾಗೂ ಚಟುವಟಿಕೆಗಳ ಕುರಿತು ವಿವರಿಸಿದರು. ಫಿಸಿಯೋಥೆರಪಿಸ್ಟ್ ಡಾ. ಅಶ್ವಿನಿ ಎಂ. ಕುರಿಯವರ ಅವರು ವಯೋವೃದ್ಧರು ನಿಯಮಿತವಾಗಿ ಸರಳ ವ್ಯಾಯಾಮ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪೇಶ್ ಚವಾಣ್ ಅವರು ಮೆದುಳಿನ ರೋಗಗಳ ಲಕ್ಷಣಗಳು, ತಡೆಗಟ್ಟುವ ಕ್ರಮಗಳು ಹಾಗೂ ವಾಹನ ಚಾಲನೆಯ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಬಿ. ಬೆಣ್ಣೂರು ಹಾಗೂ ‘ಜೀವನ ಸಂಧ್ಯಾ ಸುಖಾಲಯ’ ಟ್ರಸ್ಟ್ನ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ವೃದ್ಧಾಶ್ರಮದ ನಿವಾಸಿಗಳಿಗೆ ನರ್ಸಿಂಗ್ ಸಿಬ್ಬಂದಿ ರವಿ ಎಸ್. ನಂದ್ಯಾಳ್ ಹಾಗೂ ಎನ್ಸಿಡಿ ಸಿಬ್ಬಂದಿಯಿಂದ ಆರೋಗ್ಯ ತಪಾಸಣೆ ನಡೆಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ವೃದ್ಧಾಶ್ರಮದ ವ್ಯವಸ್ಥಾಪಕಿ ಶ್ರೀಮತಿ ಲಕ್ಷ್ಮೀ ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 