ಕಾರವಾರ, ಫೆ.5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ ಕಾರವಾರ ಇವರ ಸಂಯುಕ್ರ ಆಶ್ರಯದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯನ್ನು ಕಾರ್ಯಕ್ರಮ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನೀರಜ್ ಬಿ.ವಿ, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜಿಲ್ಲಾ ಆಧೀಕ್ಷಕರು ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಕುಡ್ತಲಕರ, ಜಿಲ್ಲಾ ಸರ್ವೇಕ್ಷಣಾಧಿಕರಿ ಡಾ. ಆರ್ಚನಾ ನಾಯಕ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ನಟರಾಜ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅನ್ನಪೂರ್ಣ ವಸ್ತ್ರದ, ತಾಲೂಕು ಆರೊಗ್ಯ ಅಧಿಕಾರಿ ಡಾ. ಸೂರಜ್ ನಾಯಕ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಎಸ್. ಕನ್ನಕ್ಕನವರ ಮತ್ತಿತರರು ಉಪಸ್ಥಿತರಿದ್ದರು.
ಸ್ತನ ಕ್ಯಾನ್ಸರ್ ಕುರಿತು ಜಸಿಂತಾ, ಗರ್ಭಕಂಠದ ಕ್ಯಾನ್ಸರ್ ಕುರಿತು ಶಾಂತಿಕಾ ನಾಯಕ, ಬಾಯಿ ಕ್ಯಾನ್ಸರ್ ಕುರಿತು ಸುವರ್ಣ ಗಾಂವಕರ ಉಪನ್ಯಾಸ ನೀಡಿದರು.