ವಿಶ್ವ ಗ್ರಾಹಕರ ದಿನಾಚರಣೆ

World Consumer Day

ವಿಶ್ವ ಗ್ರಾಹಕರ ದಿನಾಚರಣೆ  

ಗದಗ 20: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್  ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆಹಾರ ಸುರಕ್ಷತೆ ಮತು ್ತಗುಣಮಟ್ಟ  ಪ್ರಾಧಿಕಾರ, ವಾರ್ತಾ ಇಲಾಖೆ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಸುಸ್ಥಿರ ಜೀವನ ಶೈಲಿಗೆ  ಒಂದು ಸರಳ ಪರಿವರ್ತನೆ ಘೋಷವಾಕ್ಯದೊಂದಿಗೆ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮಹಾವಿದ್ಯಾಲಯದ ಎ.ಸಿ. ಆಡಿಟೋರಿಯಂ ಹಾಲ್ ದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಜರುಗಿತು.    

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್‌.ಶಿವನಗೌಡ್ರ ಅವರು  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ  ಗ್ರಾಹಕರು ಯಾವುದೇ ವಸ್ತುವನ್ನು ಖರೀದಿಸುವಾಗ ಅಥವಾ ಸೇವೆ  ಪಡೆಯುವಾಗ ಪರೀಶೀಲನೆ ಮಾಡುವುದು ಅವಶ್ಯವಾಗಿದೆ. ಒಂದು ವೇಳೆ ವಸ್ತುವನ್ನು ಖರೀದಿಸಿದಾಗ ಮೋಸ ಹೋದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ  ಎಂದು ತಿಳಿಸಿದರು. ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎ.ಜಿ. ಮಾಲ್ದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎಸ್‌.ಜಿ. ಪಲ್ಲೇದ , ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ , ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿ ಪಾಟೀಲ, ಆಹಾರ  ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಜಿಮ್ಸ್‌  ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. 

ಇದೇ ಸಂದರ್ಭದಲ್ಲಿ ತೂಕ ಮತ್ತು ಅಳತೆ ಮತ್ತು ಪೊಟ್ಟಣ ಸಾಮಗ್ರಿಗಳ ವಸ್ತು ಪ್ರದರ್ಶನ , ಆಹಾರ ಸುರಕ್ಷತೆ ಮತ್ತು ಆಹಾರ ಕಲಬೆರಕೆ ಕುರಿತು ಭಿತ್ತಿ ಚಿತ್ರ ಪ್ರದರ್ಶನ ಜರುಗಿತು.