ಇಂದು ಕೊಪ್ಪಳದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ

World Consumer Day celebrated in Koppal today

ಇಂದು ಕೊಪ್ಪಳದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ

ಕೊಪ್ಪಳ 19: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-2025 ಕಾರ್ಯಕ್ರಮವನ್ನು ಮಾ. 20 ರಂದು ಬೆಳಿಗ್ಗೆ 11.45 ಗಂಟೆಗೆ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.  

ಜಿಲ್ಲಾಧಿಕಾರಿ ನಲೀನ್ ಅತುಲ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಜಿ.ಇ. ಸೌಭಾಗ್ಯಲಕ್ಷ್ಮೀ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.  

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ರಾಜು ಎನ್ ಮೇತ್ರಿ, ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ದೊಡ್ಡಮನಿ ಹನುಮಂತ ನಾಯಕ್, ಕಾಲೇಜಿನ ವಾಣಿಜ್ಯ ವಿಭಾಗದ ಡಾ. ವರುಣಿ ಅವರು ಭಾಗವಹಿಸುವರು. ನ್ಯಾಯವಾದಿಗಳು, ಹಾಗೂ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಹಾದಿಮನಿ ಅವರು ವಿಶೇಷ ಉಪನ್ಯಾಸ ನೀಡುವರು.  

ಕಾರ್ಯಕ್ರಮದಲ್ಲಿ ಕೊಪ್ಪಳ ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕರಾದ ಶಶಿಕಾಂತ ರಜಪೂತ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಜಿಲ್ಲಾ ಅಂಕಿತ ಅಧಿಕಾರಿ ಡಾ.ಅಲಕನಂದ ಡಿ. ಮಳಗಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕ ಸೋಮಶೇಖರ್ ಬಿರಾದರ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬೋದಕ-ಬೋದಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.