ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಪೂರ್ವಭಾವಿ ಸಭೆ
World Day Against Child Labor: Preparatory meeting
ಗದಗ 2: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ 12ರಂದು ಆಚರಿಸಲು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಿ.ಎನ್.ಶ್ರೀಧರ್ ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವುದೇ ಈ ದಿನಾಚರಣೆಯ ಪ್ರಮುಖ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ಪರಿಣಾಮಕಾರಿಯಾಗಬೇಕು. ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಕಸ ವಿಲೇವಾರಿ ವಾಹನದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಮೈಕ್ ಮೂಲಕ ಪ್ರಚುರಪಡಿಸಬೇಕು ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ್ ಸೋಮನಕಟ್ಟಿ ಮಾತನಾಡಿ ಬರುವ ಜೂನ್ 12 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಆಡಿಟೋರಿಯಂ ಹಾಲ್‌ದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುವುದು. ಈ ದಿನಾಚರಣೆಯ ಪ್ರಯುಕ್ತ ಪ್ರೌಢಶಾಲಾ, ಕಾಲೇಜು, ಎನ್.ಎಸ್.ಎಸ್, ಎನ್.ಸಿ.ಸಿ. ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ , ಚಿತ್ರಕಲೆ, ಭಾಷಣ ಸ್ಪರ್ಧೆಗಳನ್ನು ಏರಿ್ಡಸಲಾಗುತ್ತಿದ್ದು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದ ದಿನದಂದು ಬಹುಮಾನ ವಿತರಿಸಲಾಗುವುದು ಎಂದು ಸಭೆಗೆ ವಿವರಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 