ಹಾವೇರಿ 04: ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ ಎಂಬ ವಿಶ್ವ ಸಂಸ್ಥೆಯ ಘೋಷವಾಕ್ಯದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಮಂಗಳವಾರ ನಗರದ ಹೊಸಮಠದ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಜರುಗಿತು.
ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಮಾಳಗಿ, ಉಪ ವಿಭಾಗಧಿಕಾರಿ ಚನ್ನಪ್ಪ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಕಲ್ಯಾಣಧಿಕಾರಿ ಶ್ರೀಮತಿ ಆಶು ನದಾಫ, ಜಿಲ್ಲಾ ವಿಕಲಚೇತನರ ಸಂಘದ ಅಧ್ಯಕ್ಷ ಪುಟ್ಟಪ್ಪ ಜಲದಿ, ಜಿಲ್ಲಾ ವಿಕಲಚೇತನರ ಸಂಘದ ಉಪಾಧ್ಯಕ್ಷ ಮೌನೇಶ ಬಡಿಗೇರ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮೊದಲು ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾದ ಜಾಥಾ ಹಾಗೂ ಬೈಕ್ ರಾ್ಯಲಿ ನಗರದ ವೀರಭದೇಶ್ವರ ದೇವಸ್ಥಾನದಿಂದ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹೊಸಮಠದ ಸಮುದಾಯ ಭವನ ತಲುಪಿತು.