ವಿಶ್ವ ಮಧುಮೇಹ ದಿನಾಚರಣೆ: ನ. 14 ರಂದು ಉಚಿತ ತಪಾಸಣಾ ಶಿಬಿರ
World Diabetes Day: Free check-up camp on Nov. 14
ವಿಜಯಪುರ 12: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಬಾಗಲಕೋಟೆ ರಸ್ತೆಯ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಮಹಾವಿದ್ಯಾಲಯದ ನಗರ ಆರೋಗ್ಯ ಕೇಂದ್ರದಲ್ಲಿ ನವೆಂಬರ್ 14 ರಂದು ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸೆ ಉಚಿತ ಶಿಬಿರ ನಡೆಯಲಿದೆ.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ವಿಜಯಪುರ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ, ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಈ ಶಿಬಿರ ನಡೆಯಲಿದೆ.
ಈ ಸಂದರ್ಭದಲ್ಲಿ ರಕ್ತ, ಮೂತ್ರ ತಪಾಸಣೆ, ಮೋನೊಫಿಲಾಮೆಂಟ್, ಬಯೋಥೀಸಿಯೋಮೀಟರ್, ಹ್ಯಾರಿಸ್ ಮ್ಯಾಟ್ ಪರೀಕ್ಷೆಗಳನ್ನು ಮಾಡಲಾಗುವುದು. ತಪಾಸಣೆ ಮತ್ತು ಚಿಕಿತ್ಸೆ ಅಗತ್ಯವಿರುವ ಮಧುಮೇಹಿಗಳು ಶಿಬಿರದ ಸದುಪಯೋಗವನ್ನು ಪಡೆಯಬೇಕು ಎಂದು ಶಿಬಿರದ ಸಂಚಾಲಕ ಮತ್ತು ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹಾಗೂ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 